ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕ: ಜ. 2 & 3 ರಂದು ಮೂಲ ದಾಖಲಾತಿ ಪರಿಶೀಲನೆ
): ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ 19 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ನೇಮಕಾತಿ ಮಾಡುವ ಸಲುವಾಗಿ ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ 1:3 ಅನುಪಾತದಲ್ಲಿ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಕೊಪ್ಪಳ ಜಿಲ್ಲಾ ವೆಬ್‌ಸೈಟ್ koppal.nic.in ರಲ್ಲಿ ಪ್ರಕಟಿಸಲಾಗಿದ್ದು, ಅರ್ಹತಾ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಮೂಲ ದಾಖಲಾತಿ ಪರಿಶೀಲನೆಯು ಜನವರಿ 2 ಮತ್ತು 3 ರಂದು ಬೆಳಗ್ಗೆ 10 ಗಂಟೆಯಿAದ ಸಂಜೆ 5.30ರವರೆಗೆ ನಡೆಯಲಿದೆ.