ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಿಗೆ ವಿಶೇಷ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ: ಅವಧಿ ವಿಸ್ತರಣೆ
ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಬಿ.ಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಜನವರಿ 6 ರವರೆಗೆ ವಿಸ್ತರಿಸಲಾಗಿದೆ.
2024-25ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ) ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜ್ಯುಕೇಶನ್ (National Council for Teacher Education) ನಿಂದ ಮಾನ್ಯತೆ ಪಡೆದಿರುವ ಸರ್ಕಾರಿ, ಅರೆಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ಬಿ.ಎಡ್ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ರೂ. 25,000 ಗಳ ವಿಶೇಷ ಪ್ರೋತ್ಸಾಹಧನ ನೀಡಲು ಆನ್‌ಲೈನ್ ಅರ್ಜಿಯನ್ನು ಆಹ್ವಾನಿಸಿದ್ದು, ಈ ಯೋಜನೆಯ ಸದುಪಯೋಗ ಪಡೆಯಲು ಅರ್ಹ ಅಭ್ಯರ್ಥಿಗಳು ಜನವರಿ 6 ರೊಳಗಾಗಿ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಅರ್ಜಿ ಸಲ್ಲಿಸಿ ಅಗತ್ಯ ದಾಖಲೆಗಳೊಂದಿಗೆ ಹಾರ್ಡ್ ಪ್ರತಿಗಳನ್ನು ಆಯಾ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಜಿಲ್ಲಾ ಅಲ್ಪಸಂಖ್ಯಾತರ ಕಛೇರಿ ಹಾಗೂ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಕೊಪ್ಪಳ :08539-225070, ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ ಗಂಗಾವತಿ :08533-230027, 9972524670 ಕುಷ್ಟಗಿ: 8861610578 ಹಾಗೂ ಯಲಬುರ್ಗಾ: 8095191406, ಇಲ್ಲಿಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅಜ್ಮೀರ್ ಅಲಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.