ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್‌ರ ನಿಧನ:  ಭಾರಧ್ವಾಜ್ ವಿಷಾದ

0

Get real time updates directly on you device, subscribe now.

ಗಂಗಾವತಿ: ಮಾಜಿ ಪ್ರಧಾನಿ ಡಾ. ಮನಮೋಹನಸಿಂಗ್ ರವರ ಅಗಲಿಕೆ ದೇಶಕ್ಕೆ ತುಂಬಲಾರದ ನಷ್ಟ ಎಂದು ಕ್ರಾಂತಿಚಕ್ರ ಬಳಗದ ಅಧ್ಯಕ್ಷ ಭಾರಧ್ವಾಜ್ ಪ್ರಕಟಣೆಯಲ್ಲಿ ವಿಷಾದ ವ್ಯಕ್ತಪಡಿಸಿದರು.
ಭಾರತದ ಹೆಮ್ಮೆಯ ಮಾಜಿ ಪ್ರಧಾನ ಮಂತ್ರಿಗಳಾದ ಡಾ. ಮನಮೋಹಸಿಂಗ್‌ರು ಆರ್ಥಿಕ ತಜ್ಞರಾಗಿದ್ದು, ೧೯೯೦ ರಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ತೀವ್ರ ಕುಂಟಿತಗೊಂಡು ಗಂಭೀರ ಸ್ಥಿತಿಯಲ್ಲಿದ್ದಾಗ ಮನಮೋಹನಸಿಂಗ್‌ರು ದೇಶದ ಆರ್ಥಿಕ ಸ್ಥಿತಿಯಲ್ಲಿ ಬಲಪಡಿಸುವಲ್ಲಿ ಪ್ರಮುಖ ಪಾತ್ರಹಿಸಿದ್ದರು. ನಂತರ ಅವರು ೨೦೦೪ ರಿಂದ ೨೦೧೪ ರವರೆಗೆ ಹತ್ತುವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ಭಾರತದ ಆಥಿಕತೆಯನ್ನು ಪ್ರಪಂಚ ಮಟ್ಟದಲ್ಲಿ ಎರಡನೇ ಸ್ಥಾನಕ್ಕೆ ಏರಿಸಿದ್ದರು. ಅವರ ಒಂದು ಆರ್ಥಿಕ ನೀತಿಯಿಂದ ಕಳೆದ ಹತ್ತು ವರ್ಷಗಳಿಂದ ಬಿಜೆಪಿ ಯವರು ಅಧಿಕಾರ ನಡೆಸುತ್ತಿದ್ದಾರೆ. ದೇಶದ ಆರ್ಥಿಕ ಸ್ಥಿತಿ ಭದ್ರವಾಗಿರುವುದಕ್ಕೆ ಮನಮೋಹನಸಿಂಗ್‌ರೇ ಕಾರಣರಾಗಿದ್ದಾರೆ. ದೇಶ ಕಂಡ ಅಪ್ರತಿಮ ಆರ್ಥಿಕ ನೀತಿಯ ತಜ್ಞರಾಗಿದ್ದ ಮಾಜಿ ಪ್ರಧಾನಿ ಸಿಂಗ್‌ರನ್ನು ಕಳೆದುಕೊಂಡ ಭಾರತ ಈಗ ಸಂಕಷ್ಟದಲ್ಲಿ ಸಿಲುಕಿದೆ ಎಂದು ಭಾರಧ್ವಾಜ್ ಕಳವಳ ವ್ಯಕ್ತಪಡಿಸಿದರು.

Get real time updates directly on you device, subscribe now.

Leave A Reply

Your email address will not be published.

error: Content is protected !!