ಶ್ರೀ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಟ್ರಾಫಿಕ್ ಸಮಸ್ಯೆಗಳಾಗದಂತೆ ಮುಂಜಾಗ್ರತೆವಹಿಸಿ – ಜಿಲ್ಲಾಧಿಕಾರಿ ನಲಿನ್ ಅತುಲ್
gavimath jatra_2025 koppal_Administration_meeting
: 2025ನೇ ಜನವರಿ 15 ರಂದು ನಡೆಯುವ ಶ್ರೀ ಗವಿಸಿದ್ದೇಶ್ವರ ಜಾತ್ರೆಗೆ ಲಕ್ಷ್ಯಾಂತರ ಭಕ್ತರು ಬರುವುದರಿಂದ ಟ್ರಾಫಿಕ್ ಸಮಸ್ಯೆಗಳಾಗದಂತೆ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಇತರೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಲಿನ್ ಅತುಲ್ ಸೂಚನೆ ನೀಡಿದರು.
ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಕುರಿತು ಅಧಿಕಾರಿಗಳಿಗೆ ಕರೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
ಕಳೆದ ವರ್ಷದಂತೆ ಈ ವರ್ಷವು ಜಾತ್ರೆಗೆ ಬರುವ ಭಕ್ತಾದಿಗಳಿಗೆ ಯಾವುದೇ ಸಮಸ್ಯೆಗಳಾಗದಂತೆ ನೋಡಿಕೊಳ್ಳಬೇಕು. ತುರ್ತು ಸಂದರ್ಭದಲ್ಲಿ ಜನರಿಗೆ ಯಾವುದೇ ಸಮಸ್ಯೆಗಳಾದಲ್ಲಿ ತಕ್ಷಣ ಸೇವೆ ನೀಡಲು ಆರೋಗ್ಯ ಇಲಾಖೆಯ ತಂಡ ತೈಯಾರಿಯಲ್ಲಿ ಇರಬೇಕು. ಅದರಲ್ಲಿ ನುರಿತ ವೈದ್ಯರು ಇರುವಂತೆ ನೋಡಿಕೊಳ್ಳಬೇಕು. ಸ್ವಚ್ಚತೆಗಾಗಿ ಹೆಚ್ಚಿನ ಪೌರ ಕಾರ್ಮಿಕರ ನಿಯೋಜನೆ ಮಾಡಬೇಕು ಮತ್ತು ಸೂಕ್ತ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡುವಂತೆ ಸಂಬAಧಿಸಿದ ಇಲಾಖೆಯ ಅಧಿಕಾರಿಗಳಿಗೆ ಹೇಳಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಮಾತನಾಡಿ ಕುಡಿಯುವ ನೀರಿನ ಸಮಸ್ಯೆಗಳಾಗದಂತೆ ಮುಂಜಾಗ್ರತೆಯಾಗಿ ಎರಡು ಕುಡಿಯುವ ನೀರಿನ ಹೆಚ್ಚುವರಿ ಟ್ಯಾಂಕರಗಳ ವ್ಯವಸ್ಥೆ ಮಾಡಬೇಕು. ಕೆಲವು ಕಡೆ ಓಪನ್ ವೈರಿಂಗ್ ಇರುತ್ತವೆ ಹಾಗಾಗಿ ಜೆಸ್ಕಾಂನವರು ಎಲೆಕ್ಟ್ರಿಕಲ್ ಫಿಟ್ನೆಸ ಕುರಿತು ಪರಿಶೀಲನೆ ಮಾಡಬೇಕು. ಎರಡು ಅಗ್ನಿಶಾಮಕ ದಳದ ವಾಹನಗಳನ್ನು ತೈಯಾರಿಯಲ್ಲಿ ಇಡಬೇಕು ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್. ಎಲ್ ಅರಸಿದ್ದಿ ಮಾತನಾಡಿ ಟ್ರಾಫಿಕ್ ಸಮಸ್ಯೆಗಳಾಗದಂತೆ ಪಾರ್ಕಿಂಗ್ ವ್ಯವಸ್ಥೆ ಮಾಡಿದ ಮಾಹಿತಿಯನ್ನು ಮುಂಚಿತವಾಗಿ ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ತಿಳಿಸುವ ಕೆಲಸ ನಮ್ಮ ಇಲಾಖೆಯ ಅಧಿಕಾರಿಗಳು ಮಾಡಬೇಕು. ಅಲ್ಲದೆ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಸಿಬೇಕು. ಜಾತ್ರೆಯ ದಿನದಂದು ಅಂದಾಜು 8 ರಿಂದ 10 ಲಕ್ಷ್ಯ ಜನರು ಸೇರುವುದರಿಂದ ಸೂಕ್ತ ಸಾರಿಗೆ ಜೊತೆಗೆ ಎಲ್ಲಾ ಕಡೆ ಲೈಟಿಂಗ್ ವ್ಯವಸ್ಥೆಯಾಗಬೇಕೆಂದು ಹೇಳಿದರು.
ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ. ಸಹಾಯಕ ಆಯುಕ್ತರಾದ ಮಹೇಶ್ ಮಾಲಗಿತ್ತಿ. ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರೇಷ್ಮಾ ಹಾನಗಲ್. ಕೊಪ್ಪಳ ತಹಶಿಲ್ದಾರ ವಿಠಲ್ ಚೌಗಲಾ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿಯ ಆರಕ್ಷಕ ನಿರೀಕ್ಷಕರಾದ ನಾಗರಾಜ ಆರ್. ನಿರ್ಮಿತಿ ಕೇಂದ್ರದ ಶಶಿಧರ. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ. ಗವಿಸಿದ್ದೇಶ್ವರ ಮಠದ ಭಕ್ತರಾದ ಬಸವರಾಜ ಬಳ್ಳೊಳಿ. ಶರಣು ಶೆಟ್ಟರ್ ಸೇರಿದಂತೆ ಲೋಕೋಪಯೋಗಿ ಇಲಾಖೆ. ಸಾರಿಗೆ. ಜೆಸ್ಕಾಂ. ನಗರಸಭೆ. ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.