ವಿಶ್ವ ಮಾನವ ದಿನಾಚರಣೆ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ
ವಿಶ್ವ ಮಾನವ ದಿನಾಚರಣೆ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಮಹಾಂತೇಶ ಮಲ್ಲನಗೌಡರ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಗದೀಶ್, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಸುಧಾಕರ್ ಅ ಮಾನೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಳ್ಳಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎ.ಬಸವರಾಜ ಹಾಗೂ ಮತ್ತಿತರರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.