ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ
: ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಆಗಸ್ಟ್ 05 ಮತ್ತು 06ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಸಚಿವರು ಆ.05ರ ಬೆಳಗ್ಗೆ 6 ಗಂಟೆಗೆ ಬೆಂಗಳೂರಿನಿಂದ ನಿರ್ಗಮಿಸಿ ಬೆಳಗ್ಗೆ 11 ಗಂಟೆಗೆ ಕೊಪ್ಪಳ ನಗರಕ್ಕೆ ಆಗಮಿಸುವರು. ಮಧ್ಯಾಹ್ನ 12.30ಕ್ಕೆ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ನಡೆಯಲಿರುವ ಗೃಹಜ್ಯೋತಿ (ಉಚಿತ ಬೆಳಕು, ಸುಸ್ಥಿರ ಬದುಕು) ಯೋಜನೆಗೆ ಚಾಲನೆ ನೀಡುವರು. ಸಂಜೆ 4ಕ್ಕೆ ಕೊಪ್ಪಳದಿಂದ ನಿರ್ಗಮಿಸಿ, ಗಂಗಾವತಿ ಮೂಲಕ ಸಂಜೆ 5ಕ್ಕೆ ಕನಕಗಿರಿಗೆ ತೆರಳಿ ಸಾರ್ವಜನಿಕರ ಭೇಟಿ ಮತ್ತು ಕುಂದುಕೊರತೆಗಳ ವಿಚಾರಣೆ ನಡೆಸುವರು. ರಾತ್ರಿ 8ಕ್ಕೆ ಕನಕಗಿರಿಯಿಂದ ನಿರ್ಗಮಿಸಿ, 8.30ಕ್ಕೆ ಕಾರಟಗಿಗೆ ಆಗಮಿಸಿ ಸಾರ್ವಜನಿಕರ ಭೇಟಿ ಮತ್ತು ಕುಂದುಕೊರತೆಗಳ ವಿಚಾರಣೆ ನಡೆಸಿ ಬಳಿಕ ಕಾರಟಗಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಆಗಸ್ಟ್ 06ರಂದು ಬೆಳಿಗ್ಗೆ 10 ಗಂಟೆಗೆ ಕಾರಟಗಿಯ ಆರ್.ಜಿ ರಸ್ತೆಯಲ್ಲಿರುವ ಪದ್ಮಶ್ರೀ ಕನ್ವೆನ್ಸಸ್ ಹಾಲ್‌ನಲ್ಲಿ ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘ(ರಿ) ಕಾರಟಗಿ ಇವರ ವತಿಯಿಂದ ಏರ್ಪಡಿಸಿರುವ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಸಚಿವರು ಅಂದು ಕಾರಟಗಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.