ಪ್ರಧಾನಮಂತ್ರಿ ಶಿಷ್ಯವೇತನ ಯೋಜನೆ: ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ
ಮಾಜಿ ಸೈನಿಕರ ಮಕ್ಕಳಿಗೆ ಪ್ರಧಾನಮಂತ್ರಿ ಶಿಷ್ಯವೇತನ ಯೋಜನೆಯಡಿ ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಬಾಗಲಕೋಟೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಬಾಗಲಕೋಟೆ ದೂರವಾಣಿ ಸಂಖ್ಯೆ 08354-235434 ನ್ನು ಸಂಪರ್ಕಿಸಬಹುದಾಗಿದೆ.