ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

0

Get real time updates directly on you device, subscribe now.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಕೊಪ್ಪಳ ಇವರು ಸ್ವಯಂ ಉದ್ಯೋಗ ಪ್ರಾರಂಭಿಸುವ ಆಸಕ್ತರಿಗೆ ಕೊಪ್ಪಳದಲ್ಲಿ 30 ದಿನಗಳ ಮೊಬೈಲ್ ಫೋನ್ಸ್ ಮತ್ತು ಸರ್ವಿಸಿಂಗ್ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
 ಈ ತರಬೇತಿಯಲ್ಲಿ ಆಯಾ ವೃತ್ತಿಗಳಲ್ಲಿ ಕೌಶಲ್ಯದ ಪ್ರಾಯೋಗಿಕ ಹಾಗೂ ಸಿದ್ಧಾಂತದೊಂದಿಗೆ ಸ್ವಯಂ ಉದ್ಯಮಗಳ ಬಗ್ಗೆ ಮಾಹಿತಿ, ಉದ್ಯಮಶೀಲತೆ, ಯಶಸ್ವಿ ಉದ್ಯಮಶೀಲರ ಗುಣಲಕ್ಷಣಗಳು. ಉದ್ಯಮಗಳನ್ನು ಪ್ರಾರಂಭಿಸುವ ಹಂತಗಳು, ಸ್ವಯಂ ಉದ್ಯೋಗಕ್ಕೆ ಇರುವ ಸರ್ಕಾರದ ಯೋಜನೆಗಳು, ಬ್ಯಾಂಕ್ ವ್ಯವಹಾರ ಮಾಡುವ ಬಗ್ಗೆ, ಸಾಲ ಮತ್ತು ಹಣಕಾಸು ಮತ್ತು ಹಣಕಾಸೇತರ ಸೌಲಭ್ಯಗಳ ಬಗ್ಗೆ, ಲೆಕ್ಕ ಪತ್ರ ನಿರ್ವಹಣೆ, ಯೋಜನಾ ವರದಿ ತಯಾರಿಕೆ, ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವಲ್ಲಿ ಸಹಾಯ ನೀಡುವದು ಮತ್ತು ಸಂಬಂಧಪಟ್ಟ ಇತ್ಯಾದಿ ವಿಷಯಗಳ ಬಗ್ಗೆ ಅನುಭವಿ ಅತಿಥಿ ಬೋಧಕರಿಂದ ಉಪನ್ಯಾಸ / ಮಾಹಿತಿ ನೀಡಲಾಗುವದು. ಯಶಸ್ವಿಯಾಗಿ ತರಬೇತಿ ಪೂರ್ಣಗೊಳಿಸಿದವರಿಗೆ ಪ್ರಮಾಣ ಪತ್ರ ನೀಡಲಾಗುವದು. ಸ್ವಯಂ ಉದ್ಯಮಗಳನ್ನು ಪ್ರಾರಂಭಿಸಲು ಅರ್ಹರಿಗೆ ಸರ್ಕಾರಿ ಯೋಜನೆ ಅಡಿಯಲ್ಲಿ ಬ್ಯಾಂಕ್ ಸಾಲ ಸೌಲಭ್ಯಕ್ಕಾಗಿ ಶಿಫಾರಸ್ಸು ಮಾಡಲಾಗುವದು.
ಅರ್ಜಿ ಸಲ್ಲಿಸಲು 2025ರ ಜನವರಿ 6 ಕೊನೆಯದಿನವಾಗಿದ್ದು, ಅಭ್ಯರ್ಥಿಗಳು 18 ವರ್ಷ ದಿಂದ 40 ವರ್ಷ ವಯಸ್ಸಿನವರಾಗಿರಬೇಕು. ಕನಿಷ್ಠ ಎಸ್.ಎಸ್.ಎಲ್.ಸಿ ಪಾಸ್ ಆದ ಎಲ್ಲಾ ವರ್ಗದ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ತರಬೇತಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ ಕಚೇರಿ ಕೊಪ್ಪಳ ಆವರಣ, ನಗರಸಭೆ ಎದುರುಗಡೆ, ಇಲ್ಲಿಗೆ ಅರ್ಜಿ ಸಲ್ಲಿಸಬಹುದಾಗಿದೆ ಅಥವಾ ಮೊಬೈಲ್ ಮುಖಾಂತರ ತಮ್ಮ ಹೆಸರುವನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ; 7204016012, 9986332736 ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಸಿಡಾಕ್ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Leave A Reply

Your email address will not be published.

error: Content is protected !!