ಜಿಲ್ಲಾ ಬಾಲಕಾರ್ಮಿಕ ಯೋಜನೆ: ತಪಾಸಣೆ, ವಿವಿಧಡೆ ದಾಳಿ
: ಕೊಪ್ಪಳ ಜಿಲ್ಲಾ ಬಾಲಕಾರ್ಮಿಕ ಯೋಜನೆಯಡಿ ಜಿಲ್ಲೆಯ ವಿವಿಧೆಡೆ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ ತಪಾಸಣೆ ಹಾಗೂ ಖಾಸಗಿ ವಾಹನಗಳಲ್ಲಿ ಮಕ್ಕಳ ಸಾಗಣಿಕೆ ಕಾರ್ಯಾಚರಣೆ ಮೂಲಕ ಬಾಲ ಮತ್ತು ಕಿಶೋರ ಕಾರ್ಮಿಕರನ್ನು ರಕ್ಷಿಸಿ ಅವರಿಗೆ ಪುನರ್ವಸತಿಗೊಳಿಸಲಾಗಿದೆ.
ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಮುಸಲಾಪುರ ಗ್ರಾಮದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಡಿಸೆಂಬರ್18 ರಂದು ತೆರೆದ ವಾಹನಗಳಲ್ಲಿ ಕೃಷಿ ಚಟುವಟಿಕೆಗಾಗಿ ಮಕ್ಕಳನ್ನು ಸಾಗಣೆ ಮಾಡುವ ವಾಹನಗಳನ್ನು ಆರ್.ಟಿ.ಒ ಅಧಿಕಾರಿಗಳ ಜೊತೆಗೂಡಿ ತಪಸಣೆ ನಡೆಸಲಾಯಿತು. ಈ ಸಮಯದಲ್ಲಿ ವಾಹನಗಳಲ್ಲಿ ಪತ್ತೆಯಾದ ಸುಮಾರು 12 ಅಪ್ರಾಪ್ತ ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಿ ಸಮೀಪದ ಶಾಲೆಗಳಿಗೆ ದಾಖಲಿಸಲಾಯಿತು. ಹಾಗೂ ಕಟ್ಟಡ ನಿರ್ಮಾಣ ಕಾರ್ಯಕ್ಕೆ ತೆರಳುತ್ತಿದ್ದ 2 ಬಾಲಕರನ್ನು ವಶಕ್ಕೆ ಪಡೆದು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಯಿತು. ಕೆಲಸಕ್ಕಾಗಿ ತೆರಳುವ ಬಾಲಕಾರ್ಮಿಕರ ತಪಾಸಣೆ ಹಾಗೂ ಖಾಸಗಿ ವಾಹನಗಳಲ್ಲಿ ಮಕ್ಕಳ ಸಾಗಣೆ ಕುರಿತು ತಪಾಸಣೆ, ದಾಳಿಯನ್ನು ಮಾಡಿ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಬಸವರಾಜ ಹಿರೇಗೌಡ್ರ, ಗಂಗಾವತಿ ಕಾರ್ಮಿಕ ನಿರೀಕ್ಷಕ ಅಶೋಕ ಎಮ್., ಆರ್.ಟಿ.ಒ ಅಧಿಕಾರಿ ಲಕ್ಷ್ಮೀಕಾಂತ್ ನಾಲ್ವರ್ ಹಾಗೂ ಮಕ್ಕಳ ಸಹಾಯವಾಣಿ-1098 ಸಿಬ್ಬಂದಿಗಳು ಉಪಸ್ಥಿತರಿದ್ದರು.
ಈ ಸಮಯದಲ್ಲಿ ಸಾರ್ವಜನಿಕರಿಗೆ ಕರಪತ್ರಗಳನ್ನು ಹಂಚುವುದರ ಮೂಲಕ 18 ವರ್ಷದ ಒಳಗಿನ ಯಾವುದೇ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳದಂತೆ ಜಾಗೃತಿ ಮೂಡಿಸಲಾಯಿತು.
****