ಜ.3 ರಂದು ಸಾವಿತ್ರಿಬಾಯಿ ಫುಲೆ ಜಯಂತ್ಯೋತ್ಸವ : ಕಿರಣ
ಕೊಪ್ಪಳ :ಸಾವಿತ್ರಿಬಾಯಿ ಫುಲೆ ಗ್ರಾಮೀಣಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸೇವಾ ಸಂಸ್ಥೆ, ಕೊಪ್ಪಳ ವತಿಯಿಂದ
194ನೇ ಅಕ್ಷರದ ಮಾತೆ ಸಾವಿತ್ರಿಬಾಯಿ ಫುಲೆ ಜಯಂತ್ಯೋತ್ಸವ ಹಾಗೂ 207ನೇ ಭೀಮಾಕೋರೆಗಾಂವ್ ವಿಜಯೋತ್ಸವ ಮತ್ತು ನೃತ್ಯ ಸ್ಪರ್ಧೆ ಕಾರ್ಯಕ್ರಮ ದಿ.03-01-2025 ರಂದು ಸಂಜೆ 4 ಗಂಟೆಗೆ ನಗರದ ಅಂಬೇಡ್ಕರ್ ನಗರ,ಸಜ್ಜಿಹೊಲ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಕಿರಣ್ ಎಂ. ಬಂಗಾಳಗಿಡದ ಹೇಳಿದರು.
ಅವರು ಮಂಗಳವಾರದಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ ಉದ್ಘಾಟನೆಯನ್ನು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹುಚ್ಚಮ್ಮ ಚೌದ್ರಿ ಕುಣಿಕೇರಿ ನೆರವೇರಿಸುವರು, ಅಧ್ಯಕ್ಷತೆಯನ್ನು ಬಂಡಾಯ ಸಾಹಿತಿಗಳು ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಅಲ್ಲಮ ಪ್ರಭು ಬೆಟ್ಟದೂರು ವಹಿಸುವರು.
ವಿಶೇಷ ಉಪನ್ಯಾಸಕರಾಗಿ
ಕ್ಷೇತ್ರ ಶಿಕ್ಷಣಾಧಿಕಾರಿ ಶಂಕರಯ್ಯ ಟಿ.ಎಸ್ ಪಾಲ್ಗೊಳ್ಳುವರು. ಮುಖ್ಯ ಅತಿಥಿಗಳಾಗಿ ಸಂಸದ ಕೆ.ರಾಜಶೇಖರ ಹಿಟ್ನಾಳ, ನಗರಸಭೆಯ ಅಧ್ಯಕ್ಷ ಅಮ್ಮದ್ ಪಟೇಲ್, ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ಶ್ರೀ ಗವಿಸಿದ್ದೇಶ್ವರ ಅರ್ಬನ್ ಬ್ಯಾಂಕ್ ಅಧ್ಯಕ್ಷ ರಾಜಶೇಖರ ಆಡೂರು, ಜಿಲ್ಲಾ ವಿಮಾ ಅಧಿಕಾರಿ ರಾಜಶೇಖರ ಗೌರೆ, ಸೇರಿದಂತೆ ಮತ್ತಿತರರು ಪಾಲ್ಗೊಳ್ಳುವರು.
ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಮುಖಂಡರಾದ ಸತೀಶ್ ದೊಡ್ಡಮನಿ, ಗಣೇಶ್ ತಾಂಬ್ರೆ ನವರ್, ಗವಿಸಿದ್ದಪ್ಪ ಕಸ್ತೂರಿ, ಪ್ರವೀಣ್ ದೊಡ್ಡಮನಿ, ಕೀರ್ತಿರಾಜ್ ಬಂಗಾಳಿಗಿಡದ ಉಪಸ್ಥಿತರಿದ್ದರು.