ಹಿಂದುಳಿದ ವರ್ಗದವರಿಗೆ ಪಿ.ಎಚ್.ಡಿ ಅಧ್ಯಯನಕ್ಕೆ ಫೆಲೋಶಿಪ್: ಅರ್ಜಿ ಆಹ್ವಾನ
ಅಭ್ಯರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಅಥವಾ ತಿಬಿ ಸೇರಿರಬೇಕು. ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ ಪ್ರವರ್ಗ-1ಕ್ಕೆ ರೂ.4.50 ಲಕ್ಷ
ಪ್ರವರ್ಗ-2ಎ, 3ಎ, 3ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.3.50 ಲಕ್ಷಕ್ಕೆ ಮೀರಿರಬಾರದು. ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.55 ಅಂಕಗಳನ್ನು ಪಡೆದಿರಬೇಕು. ಅಭ್ಯರ್ಥಿಗಳು ಪೂರ್ಣಾವಧಿ ಪಿ.ಎಚ್.ಡಿ ಅಧ್ಯಯನಕ್ಕಾಗಿ ಮಾಡಿಸುವ ನೋಂದಣಿ ದಿನಾಂಕವು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ ವ್ಯಾಸಂಗ ವೇತನ/ ಫೆಲೋಶಿಫ್‌ಗಾಗಿ ಅರ್ಜಿ ಸಲ್ಲಿಸಲು ನಿಗದಿಪಡಿಸುವ ಕೊನೆಯ ದಿನಾಂಕಕ್ಕೆ ಹಿಂದಿನ 2 ವರ್ಷದೊಳಗಿದ್ದು, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಾಲಿನಿಂದ ಪ್ರಥಮ ವರ್ಷದ ಪಿ.ಎಚ್.ಡಿ ಅಧ್ಯಯನದಲ್ಲಿ ತೊಡಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770004 ಗೆ ಸಾರ್ವಜನಿಕ ರಜಾ ದಿನಗಳನ್ನು ಹೊರೆತು ಪಡಿಸಿ ಕಛೇರಿ ಸಮಯದಲ್ಲಿ (ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆ) ಸಂಪರ್ಕಿಸುವAತೆ ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.