ಆಗಸ್ಟ್ 06ರಂದು ಲೋಕೋಪಯೋಗಿ ಇಲಾಖೆ ಸಚಿವರ ಪ್ರವಾಸ
: ರಾಜ್ಯ ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ ಜಾರಕಿಹೊಳಿ ಅವರು ಆಗಸ್ಟ್ 6ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ 8.15ಗಂಟೆಗೆ ಗೋಕಾಕ್ ನಿಂದ ನಿರ್ಗಮಿಸಿ, ರಸ್ತೆ ಮಾರ್ಗವಾಗಿ 12-15ಕ್ಕೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹಿರೇಮನ್ನಾಪುರ ಗ್ರಾಮಕ್ಕೆ ಆಗಮಿಸಿ, ವಾಲ್ಮೀಕಿ ಸ್ವಾಭಿಮಾನಿ ಸಂಘದಿಂದ ಆಯೋಜಿಸಿರುವ “ವಾಲ್ಮೀಕಿ ಸ್ವಾಭಿಮಾನಿ ಜನಜಾಗೃತಿ ಸಮಾವೇಶ”ದಲ್ಲಿ ಪಾಲ್ಗೊಳ್ಳುವರು. ಬಳಿಕ ಸಚಿವರು ಅಂದು ಮಧ್ಯಾಹ್ನ 3.30ಕ್ಕೆ ಹಿರೇಮನ್ನಾಪುರ ಗ್ರಾಮದಿಂದ ಬೆಳಗಾವಿ ಜಿಲ್ಲೆಯ ಕಡೆಗೆ ಪ್ರಯಾಣ ಬೆಳಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.