ಪತ್ರಿಕಾ ವಿತರಕರ ವಯಸ್ಸಿನ ಮಿತಿ 70 ವರ್ಷಕ್ಕೆ ವಿಸ್ತರಿಸಿದ ಸಿಎಂ ಸಿದ್ದರಾಮಯ್ಯಗೆ ಧನ್ಯವಾದ
ಬೆಂಗಳೂರು:
ಶ್ರಮಿಕ ವರ್ಗವಾದ ಪತ್ರಿಕಾ ವಿತರಕ ಸಮುದಾಯಕ್ಕೆ ಒಳ್ಳೆಯದಾಗಲಿ ಎಂದು ಯೋಜನೆಯನ್ನು ನೀಡಲಾಗಿದ್ದು, ಅದರ ಪ್ರಯೋಜನ ಪಡೆದುಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಮತ್ತು ಕೆಯುಡಬ್ಲೂೃಜೆ ಸಂಘಟನೆಯ ಕೋರಿಕೆಯನ್ನು ಮಾನ್ಯ ಮಾಡಿ ಕಾರ್ಮಿಕ ಇಲಾಖೆ ಯೋಜನೆ ಮೂಲಕ ಪತ್ರಿಕಾ ವಿತರಕರಿಗೆ ವಿಮಾ ಸೌಲಭ್ಯ ಪಡೆಯಲು 60 ವರ್ಷ ಇದ್ದ ಮಿತಿಯನ್ನು 70 ವರ್ಷಕ್ಕೆ ಹೆಚ್ಚಳ ಮಾಡಿದ್ದರಿಂದ ತುಂಬಾ ಅನುಕೂಲವಾಗಿದೆ ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂೃಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಅವರು ಮುಖ್ಯಮಂತ್ರಿಗಳಿಗೆ ತಿಳಿಸಿ, ಧನ್ಯವಾದ ಹೇಳಿದರು.
ಈ ಬಗ್ಗೆ ಸಂತಸ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇದೇ ಸಂದರ್ಭದಲ್ಲಿ
ಎರಡು ಸಂಘಟನೆಗಳ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಕೆ.ಶಂಭುಲಿಂಗ ಅವರುಗಳು ಅಭಿನಂದಿಸಿ, ಹೊಸ ವರ್ಷದ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಕೆಯುಡಬ್ಲ್ಯೂಜೆ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೊಕೇಶ, ಖಜಾಂಚಿ ವಾಸುದೇವ ಹೊಳ್ಳ ಮತ್ತಿತರರು ಹಾಜರಿದ್ದರು