ರೈತರು ಮೊಬೈಲ್ ತಂತ್ರಾಶದ ಮೂಲಕ ಬೆಳೆಗಳ ವಿವರ ದಾಖಲಿಸಿ

0

Get real time updates directly on you device, subscribe now.

ಕೊಪ್ಪಳ ): ಕೊಪ್ಪಳ ಜಿಲ್ಲೆಯ ರೈತರು ಮೊಬೈಲ್ ತಂತ್ರಾಶದ ಮೂಲಕ ಬೆಳೆಗಳ ವಿವರವನ್ನು ದಾಖಲಿಸುವಂತೆ ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್ ಅವರು ತಿಳಿಸಿದ್ದಾರೆ.
ರೈತರು ಬೆಳೆದ ಬೆಳೆಗಳ ಬಗ್ಗೆ ನಿಖರವಾಗಿ ಮಾಹಿತಿ ಪಡೆದುಕೊಳ್ಳಲು ಈಗಾಗಲೇ ಇ-ಆಡಳಿತ ವತಿಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್ ಆ್ಯಪ್ ಮೂಲಕ ಬೆಳೆ ಸಮೀಕ್ಷೆ ನಡೆಸುವ ಕಾರ್ಯ ಜಿಲ್ಲೆಯಲ್ಲಿ ಹಿಂಗಾರು ಬೆಳೆ ಸಮೀಕ್ಷೆ ಆರಂಭವಾಗಿದ್ದು, ರೈತರು ತಮ್ಮ ಹೊಲಗಳಲ್ಲಿ ಬೆಳೆದ ಬೆಳೆಗಳ ವಿವರ ದಾಖಲಿಸಲು ಆಂಡ್ರಾಯ್ಡ್ ಆ್ಯಪ್ ಮೂಲಕ ವಿವರಗಳನ್ನು ತಾವೇ ಸ್ವತಃ ಮೊಬೈಲ್ ತಂತ್ರಾಶದ ಮೂಲಕ ಹಾಗೂ ಖಾಸಗಿ ನಿವಾಸಿಗಳ (ಪಿಆರ್) ಆ್ಯಪ್ ಮೂಲಕ ದಾಖಲಿಸಬಹುದಾಗಿದೆ.
ರೈತರು ತಮ್ಮ ಮೊಬೈಲ್‌ನಲ್ಲಿ ಗೂಗಲ್ ಪ್ಲೇಸ್ಟೋರ್ ನಿಂದ ಬೆಳೆ ಸಮೀಕ್ಷೆ ಹಿಂಗಾರು ಹಂಗಾಮಿನ Rabi Season Farmer Crop Survey 2024-25 ಆ್ಯಪ್‌ನ್ನು ಡೌನ್ಲೋಡ್ ಮಾಡಿಕೊಂಡು ಬೆಳೆ ವಿವರ ದಾಖಲಿಸಬಹುದಾಗಿದೆ.
ಬೆಳೆ ಸಮೀಕ್ಷೆ ದತ್ತಾಂಶ ಮಾಹಿತಿಯನ್ನು ಬೆಳೆ ವಿಸ್ತರಣೆ ಎಣಿಕೆ ಕಾರ್ಯದಲ್ಲಿ, ಬೆಳೆ ಕಟಾವು ಪ್ರಯೋಗದಲ್ಲಿ, ಪ್ರಕೃತಿ ವಿಕೋಪ ಸಂದರ್ಭದಲ್ಲಿ, ಬೆಳೆಹಾನಿ ವರದಿ ಸಿದ್ದಪಡಿಸಲು, ಬೆಳೆ ವಿಮಾ ಯೋಜನೆ, ಬೆಂಬಲ ಬೆಲೆ ಯೋಜನೆ, ಆರ್ ಟಿ ಸಿ ಯಲ್ಲಿ ಬೆಳೆ ವಿವರ ದಾಖಲಿಸಲು, ರಾಷ್ಟ್ರೀಯ ಹಾಗೂ ಗ್ರಾಮೀಣ ಬ್ಯಾಂಕ್ ಗಳಲ್ಲಿ ಬೆಳೆ ಸಾಲ ಮಂಜೂರು ಮಾಡಲು ಬೆಳೆ ಸಮೀಕ್ಷೆ ಮಾಹಿತಿಯನ್ನು ಉಪಯೋಗಿಸಲಾಗುತ್ತಿದ್ದು, ಜಿಲ್ಲೆಯಲ್ಲಿ 3,21,562 ಬೆಳೆ ತಾಕುಗಳಿದ್ದು, ಈ ತಾಕುಗಳಿಗೆ ರೈತರು ಬೆಳೆಗಳ ಮಾಹಿತಿಯನ್ನು ಸ್ವಯಂ ದಾಖಲಿಸಬೇಕು.
ರೈತರೇ ತಾವೇ ಸ್ವತಹ ಬೆಳೆ ಸಮೀಕ್ಷೆ ಆ್ಯಪ್ ಮೂಲಕ ತಾವು ಬೆಳೆದ ಮಾಹಿತಿ ನಿಖರವಾಗಿ ನೀಡಬಹುದಾಗಿದೆ. ಇದರಿಂದ ಮುಂಬರುವ ವ್ಯತ್ಯಾವನ್ನು ತಡೆಯಬಹುದಾಗಿದೆ. ರೈತರ ಬೆಳೆ ಸಮೀಕ್ಷೆ ಕೈಗೊಳ್ಳಲು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಪಿ.ಆರ್.ಗಳನ್ನು, ಕೃಷಿ, ತೋಟಗಾರಿಕೆ ಅಥವಾ ಕಂದಾಯ ಇಲಾಖೆಯ ಸಿಬ್ಬಂದಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Get real time updates directly on you device, subscribe now.

Leave A Reply

Your email address will not be published.

error: Content is protected !!