ಕವಡಿಪೀರ ಮೋಹರಂ ಹಿನ್ನೆಲೆ: ಮದ್ಯೆ ಮಾರಾಟ ನಿಷೇಧ

Get real time updates directly on you device, subscribe now.

ಕವಡಿಪೀರ ಮೋಹರಂ ಹಬ್ಬದ ಹಿನ್ನೆಲೆಯಲ್ಲಿ ಶಾಂತಿ ಪಾಲನೆಗಾಗಿ ಆಗಸ್ಟ್ 08ರ ಬೆಳಿಗ್ಗೆ 6 ಗಂಟೆಯವರೆಗೆ ಜಿಲ್ಲೆಯ ವಿವಿಧೆಡೆ ಮದ್ಯೆ ಮಾರಾಟ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ಆದೇಶ ಹೊರಡಿಸಿದ್ದಾರೆ.

ಕವಡಿಪೀರ ಮೋಹರಂ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕ ಹಿತಾಶಕ್ತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ಕಾಯಿದೆ 1965ರ ಕಲಂ 21ರ ಪ್ರಕಾರ ಪ್ರದತ್ತವಾದ ಅಧಿಕಾರ ಚಲಾಯಿಸಿ, ಜಿಲ್ಲೆಯ ಕೊಪ್ಪಳ ನಗರ ಠಾಣಾ ವ್ಯಾಪ್ತಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 6ರಿಂದ ಆ.6ರ ಬೆಳಿಗ್ಗೆ 6 ಗಂಟೆಯವರೆಗೆ ಮತ್ತು ಗಂಗಾವತಿ ನಗರ, ಗಂಗಾವತಿ ಗ್ರಾಮೀಣ, ಕನಕಗಿರಿ, ಕಾರಟಗಿ ಹಾಗೂ ತಾವರಗೇರಾ ಠಾಣಾ ವ್ಯಾಪ್ತಿಯಲ್ಲಿ ಆಗಸ್ಟ್ 7ರ ಬೆಳಿಗ್ಗೆ 6ರಿಂದ ಆ.8ರ ಬೆಳಿಗ್ಗೆ 6 ಗಂಟೆಯವರೆಗೆ ಮದ್ಯೆ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಈ ವಿಷಯವಾಗಿ ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ತನಿಖಾ ತಂಡ ರಚಿಸಿ ಅದರಲ್ಲಿ ಆರಕ್ಷಕ ವೃತ್ತ ನಿರೀಕ್ಷಕರು, ಅಬಕಾರಿ ವೃತ್ತ ನಿರೀಕ್ಷಕರು ಕಾರ್ಯನಿರ್ವಹಿಸಲು ಆದೇಶಿಸಿದೆ. ಈ ಆದೇಶವನ್ನು ಜಾರಿ ತರುವಲ್ಲಿ ನಿರ್ಲಕ್ಷ್ಯತನ ತೋರಿದವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!