ಗಣಿತಶಾಸ್ತ್ರ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂದರ್ಶನ
ಕೊಪ್ಪಳ ವಿಶ್ವವಿದ್ಯಾಲಯದ 2024-25ನೇ ಸಾಲಿಗೆ ಸಂಬಂಧಿಸಿದಂತೆ ಗಣಿತಶಾಸ್ತ್ರ ಸ್ನಾತಕೋತ್ತರ ವಿಭಾಗಕ್ಕೆ ಅತಿಥಿ ಉಪನ್ಯಾಸಕರ ಅವಶ್ಯವಿದ್ದು, ಅರ್ಹ ಅಭ್ಯರ್ಥಿಗಳು ಜನವರಿ 08ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಲು ಕೊಪ್ಪಳ ವಿಶ್ವ ವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.