ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವ ಎನ್ ಎಸ್ ಭೋಸರಾಜು
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಅವರು ಇಂದು ಕೊಪ್ಪಳ ಜಿಲ್ಲೆಯ ಮುನಿರಾಬಾದ್ ನಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಇಲಾಖೆಯ ಕೊಪ್ಪಳ, ಕಲಬುರ್ಗಿ, ಬೀದರ್ ಮತ್ತು ಬಳ್ಳಾರಿ ವಲಯದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿಗಳಾದ ರಾಘವನ್, ಉತ್ತರ ವಲಯದ ಮುಖ್ಯ ಅಭಿಯಂತರರಾದ ಜಗದೀಶ್ ರಾಥೋಡ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು