ನೂತನ 450 ಹಾಸಿಗೆಯ ಕಿಮ್ಸ್ ಆಸ್ಪತ್ರೆಗೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ: ವೀಕ್ಷಣೆ
ಕೊಪ್ಪಳ ಕೊಪ್ಪಳ ಮೆಡಿಕಲ್ ಕಾಲೇಜಿನ ಪಕ್ಕದಲ್ಲಿ ನೂತವಾಗಿ ಆರಂಭವಾಗುತ್ತಿರುವ 450 ಹಾಸಿಗೆಯ ಕಿಮ್ಸ್ ಆಸ್ಪತ್ರೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಸೋಮವಾರ ಭೇಟಿ ನೀಡಿದರು.
ನೂತನ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿದ ಸಚಿವರು, ನೂತನ ಕಿಮ್ಸ್ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರವನ್ನು ಮುಖ್ಯ ಮಂತ್ರಿಗಳಿಂದ ಉದ್ಘಾಟಿಸಬೇಕಾಗಿದ್ದು, ಉಳಿದ ಎಲ್ಲಾ ಸಣ್ಣ ಪುಟ್ಟ ಕಾಮಗಾರಿಗಳನ್ನು ಜನವರಿ 20 ರೊಳಗಾಗಿ ಪೂರ್ಣಗೊಳಿಸಲು ತ್ವರಿತ ಕ್ರಮ ಕೈಗೊಳ್ಳುವಂತೆ ಕಿಮ್ಸ ನಿರ್ದೇಶಕರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ, ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್, ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮಜದ್ ಪಟೇಲ್, ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ,ಸಲೀಂ ಅಳವಂಡಿ ಕೊಪ್ಪಳ ಕಿಮ್ಸ್ ನಿರ್ದೇಶಕ ವಿಜಯನಾಥ ಇಟಗಿ, ಕಿಮ್ಸ್ ಮುಖ್ಯ ಆಡಳಿತಾಧಿಕಾರಿ ಬಿ.ಕಲ್ಲೇಶ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.