ಜ. 8 & 9 ರಂದು ಸ್ಪರ್ಧಾತ್ಮಕ ಪರೀಕ್ಷಾ ಆಕಾಂಕ್ಷಿಗಳಿಗೆ `ಕೃತಕಬುದ್ದಿಮತೆ’ ತರಬೇತಿ

0

Get real time updates directly on you device, subscribe now.

ಕೊಪ್ಪಳ : : ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಪಂಚಾಯತ್ ಹಾಗೂ ಶಿಕ್ಷಣ ಫೌಂಡೇಷನ್ ಇವರ ಸಂಯುಕ್ತ ಆಶ್ರಯದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಆಕಾಂಕ್ಷಿಗಳಿಗೆ `ಕೃತಕಬುದ್ದಿಮತೆ’ ತರಬೇತಿಯನ್ನು ಜನವರಿ 8 ಮತ್ತು 9 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಪಂಚಾಯತ್ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ತರಬೇತಿಗೆ ಇಲಾಖೆ ಮತ್ತು ಸಂಸ್ಥೆಯಿಂದ ಯಾವುದೇ ಶುಲ್ಕ ನೀಡಲಾಗುವುದಿಲ್ಲ. ಅಭ್ಯರ್ಥಿಗಳು ತರಬೇತಿಗಾಗಿ ತಮ್ಮ ಸ್ವಂತ ಹಣದಲ್ಲಿ ಹಾಜರಾಗಬೇಕು. ತರಬೇತಿಯು ಎಲ್ಲರಿಗೂ ಉಚಿತವಾಗಿರುತ್ತದೆ. ಭಾಗವಹಿಸಿದವರಿಗೆ ಪ್ರಮಾಣ ಪತ್ರವನ್ನು ನೀಡಲಾಗುವುದು. ಸ್ಪರ್ಧಾತ್ಮಕ ಪರೀಕ್ಷಾ ಬರೆಯಲಿಚ್ಛೀಸುವ ಆಸಕ್ತ ಯುವಕ ಹಾಗೂ ಯುವತಿಯರು ಈ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು.
ತರಬೇತಿಯಲ್ಲಿ ಪಾಲ್ಗೊಳ್ಳಲು ಆಸಕ್ತರು https://docs.google.com/forms/d/1VsQCyk7C-i_tljwxUfwYahkDVmdkOjuun5Ai1M3SODU/editF ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇಲ್ಲಿಗೆ ಅಥವಾ ಮೊ.ಸಂ: 9740074063 ಗೆ ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Leave A Reply

Your email address will not be published.

error: Content is protected !!