ಒಡಿಶಾ ರೈಲು ದುರಂತ: ನೆರವಿಗೆ ಧಾವಿಸಿದ ಮುಖ್ಯಮಂತ್ರಿಗಳಿಗೆ ಧನ್ಯವಾದ ಸಲ್ಲಿಸಿದ ವಾಲಿಬಾಲ್ ಕ್ರೀಡಾಪಟುಗಳು

Get real time updates directly on you device, subscribe now.

ಕಲ್ಕತಾದಲ್ಲಿ ನಡೆಯುತ್ತಿರುವ 16 ವರ್ಷದೊಳಗಿನ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗೆ ಕರ್ನಾಟಕದ ಬಾಲಕ ಹಾಗೂ ಬಾಲಕಿಯರ ತಂಡ ತೆರಳಿತ್ತು, ನಿನ್ನೆ ಒಡಿಸ್ಸಾದಲ್ಲಿ ನಡೆದ ಭೀಕರ ರೈಲು ದುರಂತದ ಪರಿಣಾಮವಾಗಿ ಮರಳಿ ರಾಜ್ಯಕ್ಕೆ ವಾಪಸ್ಸು ಬರಲು ಪರಿತಪಿಸುತ್ತಿದ್ದ ತಂಡಕ್ಕೆ ರಾಜ್ಯ ಸರ್ಕಾರ ನಿಯೋಜಿಸಿದ್ದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಹಾಯ ಹಸ್ತ ಚಾಚಿ ತಂಡ ಸುರಕ್ಷಿತವಾಗಿ ರಾಜ್ಯಕ್ಕೆ ವಾಪಸ್ಸಾಗಲು ನೆರವಾಗಿದ್ದಾರೆ.

ತಂಡದ ತರಬೇತುದಾರರು ಸೇರಿದಂತೆ 32 ಸದಸ್ಯರನ್ನೊಳಗೊಂಡ ತಂಡ ತಮ್ಮ ಸಂಕಷ್ಟವನ್ನು ವಿಡಿಯೊ ಮಾಡಿ ಹೇಳಿಕೊಂಡಿದ್ದರು. ಈ ವಿಡಿಯೊ ತಲುಪಿದ ತಕ್ಷಣ ಕಾರ್ಯ ಪ್ರವೃತ್ತರಾದ ಸಂತೋಷ್ ಲಾಡ್ ಮತ್ತು ಅಧಿಕಾರಿಗಳ ತಂಡ ಎಲ್ಲರಿಗೂ ಬೆಂಗಳೂರಿಗೆ ವಿಮಾನ ಟಿಕೆಟ್ ಹಾಗೂ ಸೂಕ್ತ ವಸತಿ‌, ಊಟದ ವ್ಯವಸ್ಥೆ ಒದಗಿಸಿದ್ದಾರೆ. ತಮ್ಮ ನೆರವಿಗೆ ಧಾವಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತು ಕಾರ್ಮಿಕ ಸಚಿವ ಲಾಡ್ ಹಾಗೂ ಅಧಿಕಾರಿಗಳಿಗೆ ಕ್ರೀಡಾ ಪಟುಗಳು ಧನ್ಯವಾದ ಅರ್ಪಿಸಿದ್ದಾರೆ. ತಮ್ಮ ತಂಡ ಕೈಗೊಂಡ ರಕ್ಷಣಾ ಮತ್ತು ನೆರವಿನ ಕಾರ್ಯಗಳ ಕುರಿತು ಸಚಿವ ಸಂತೋಷ್ ಲಾಡ್ ಅವರು ದೂರವಾಣಿ ಮೂಲಕ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!
%d bloggers like this: