ಬೆಂಬಲ ಬೆಲೆ ಯೋಜನೆ: ತೊಗರಿ ಖರೀದಿ ಕೇಂದ್ರಗಳ ಪ್ರಾರಂಭ
): ಕೊಪ್ಪಳ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ತೊಗರಿ ಉತ್ಪನ್ನ ಖರೀದಿಸುವ ಸಂಬಂಧ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ತೊಗರಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಸರ್ಕಾರದ ಆದೇಶದಂತೆ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿಯನ್ನು ಪ್ರತಿ ಕ್ವಿಂಟಾಲ್‌ಗೆ ರೂ. 7550 ಗಳಂತೆ ಎಕರೆಗೆ 4 ಕ್ವಿಂಟಾಲ್‌ನಂತೆ ಒಬ್ಬ ರೈತರಿಂದ ಗರಿಷ್ಠ 40 ಕ್ವಿಂಟಲ್‌ರಂತೆ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಕೊಪ್ಪಳ ಜಿಲ್ಲೆಯ ರೈತರಿಂದ ಖರೀದಿಸುವ ಕುರಿತು ಇತ್ತೀಚೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಸಭೆ ಜರುಗಿಸಿ, ಕೊಪ್ಪಳ ತಾಲ್ಲೂಕಿನ ಹಿರೇಸಿಂಧೋಗಿ, ಕನಕಗಿರಿ ತಾಲ್ಲೂಕಿನ ನವಲಿ, ಕನಕಗಿರಿ, ಕುಷ್ಟಗಿ ತಾಲ್ಲೂಕಿನ ಹನುಮಸಾಗರ, ತಾವರಗೇರಾ, ಕುಷ್ಟಗಿ, ಹಿರೇನಂದಿಹಾಳ, ಹಾಗೂ ಕುಕನೂರು ನಲ್ಲಿ ತೊಗರಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿದೆ.
*ನೋಡಲ್ ಅಧಿಕಾರಿಗಳ ವಿವರ:* ತೊಗರಿ ಖರೀದಿ ಕೇಂದ್ರಗಳಾದ ಹಿರೇಸಿಂಧೋಗಿ ಖರೀದಿ ಕೇಂದ್ರಕ್ಕೆ ಕೊಪ್ಪಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ವಿ.ಬಸವರಾಜ ಮೊ.ಸಂ: 9448765143, ನವಲಿ ಹಾಗೂ ಕನಕಗಿರಿ ಖರೀದಿ ಕೇಂದ್ರಕ್ಕೆ ಗಂಗಾವತಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಹರೀಶ ಪತ್ತಾರ ಮೋ.ಸಂ: 9060893320, ಕುಷ್ಟಗಿ, ಹನುಮಸಾಗರ, ತಾವರಗೇರಾ, ಹಿರೇನಂದಿಹಾಳ ಖರೀದಿ ಕೇಂದ್ರಕ್ಕೆ ಕುಷ್ಟಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಸುರೇಶ ಬಿ ತಂಗನೂರು ಮೋ.ಸಂ: 9880886909, ಕುಕನೂರು ಖರೀದಿ ಕೇಂದ್ರಕ್ಕೆ ಯಲಬುರ್ಗಾ (ಕೇಂದ್ರ ಕಚೇರಿ, ಕುಕನೂರು) ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಗುರುಪ್ರಸಾದ್ ಗುಡಿ ಮೊ.ಸಂ: 9972054874, ಇವರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.
ಪ್ರತಿ ಎಕರೆಗೆ ಗರಿಷ್ಠ 04 ಕ್ವಿಂಟಲ್‌ರಂತೆ ಪ್ರತಿ ರೈತರಿಂದ ಗರಿಷ್ಠ 40 ಕ್ವಿಂಟಲ್ ತೊಗರಿ ಉತ್ಪನ್ನವನ್ನು ಖರೀದಿಸಲಾಗುತ್ತದೆ. ಎಫ್.ಎ.ಕ್ಯೂ ಗುಣಮಟ್ಟದ ತೊಗರಿಯನ್ನು ಮಾತ್ರ ಖರೀದಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಕೊಪ್ಪಳ ದೂ.ಸಂ: 08539-230040, ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.