ಫೆಬ್ರವರಿ ಮೊದಲ ವಾರದಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶ ಹಮ್ಮಿಕೊಳ್ಳಲಾಗುವುದು: ರೆಡ್ಡಿ ಶ್ರೀನಿವಾಸ’

0

Get real time updates directly on you device, subscribe now.

 : ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಸಮಾವೇಶವನ್ನು ಫೆಬ್ರವರಿ ಮೊದಲನೇ ವಾರ ಕೊಪ್ಪಳ ಜಿಲ್ಲೆಯಲ್ಲಿ ಹಮ್ಮಕೊಳ್ಳಲಾಗುವುದು ಎಂದು ಕೊಪ್ಪಳ ಜಿಲ್ಲಾ ಗ್ರಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಹೇಳಿದರು.

ಅವರು ಬುಧವಾರ ಕೊಪ್ಪಳ ಜಿಲ್ಲಾ ಪಂಚಾಯತ್ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಕರೆದ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಸಮಾವೇಶ ಹಮ್ಮಿಕೊಳ್ಳುವ ಬಗ್ಗೆ ಚರ್ಚಿಸಲು ಹಾಗೂ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ಭಾಗವಹಿಸಲಿದ್ದು, ಅವರು ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದವನ್ನು ನಡೆಸಲಿದ್ದಾರೆ. ಗೃಹಲಕ್ಷಿö್ಮ, ಗೃಹಜೋತಿ, ಶಕ್ತಿ, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳಡಿ ಲಾಭ ಪಡೆದುಕೊಂಡ ಫಲಾನುಭವಿಗಳನ್ನು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಸಮಾವೇಶಕ್ಕೆ ಕರೆ ತರಬೇಕು ಎಂದರು.

 

ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಸಮಾವೇಶಕ್ಕಾಗಿ ಫಲಾನುಭವಿಗಳನ್ನು ಸೇರಿಸಲು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಎಲ್ಲಾ ತಾಲ್ಲೂಕುಗಳ ಅಧ್ಯಕ್ಷರು ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳಿ. ಈ ಹಿನ್ನೆಲೆಯಲ್ಲಿ ತಾಲ್ಲೂಕುವಾರು ಸಭೆಗಳನ್ನು ನಡೆಸಬೇಕು. ಸಮಿತಿಯ ಎಲ್ಲಾ ಸದಸ್ಯರು ಸಹಕಾರ ನೀಡಬೇಕು. ಇದರ ಜೊತೆಗೆ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಸೇರಿಸಲು ಐದು ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ವಿಶೇಷ ಕ್ರಮ ವಹಿಸಬೇಕು ಎಂದರು.
ಗ್ಯಾರಂಟಿ ಯೋಜನೆಗಳು ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಉದ್ದೇಶವಾಗಿದೆ. ಜನಪರವಾದ ಈ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಇವುಗಳ ಲಾಭವನ್ನು ಜಿಲ್ಲೆಯ ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ಸಿಗಬೇಕು. ಯಾವುದೇ ಅರ್ಹ ಫಲಾನುಭವಿಗಳು ಈ ಯೋಜನೆಗಳಿಂದ ಹೊರಗುಳಿಯದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಅವರು ಮಾತನಾಡಿ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಸಮಾವೇಶಕ್ಕಾಗಿ ಸುಮಾರು 1.50 ಲಕ್ಷಕ್ಕೂ ಹೆಚ್ಚಿನ ಜನರನ್ನು ಸೇರಿಸುವ ಗುರಿ ಹೊಂದಲಾಗಿದ್ದು, ಗೃಹ ಲಕ್ಷ್ಮಿ ಮತ್ತು ಶಕ್ತಿ ಯೋಜನೆಯ ಲಾಭ ಪಡೆದುಕೊಂಡಿರುವ ಜಿಲ್ಲೆಯ ಕುಷ್ಟಗಿ, ಕನಕಗಿರಿ, ಗಂಗಾವತಿ ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರಗಳ ತಲಾ 20 ಸಾವಿರ ಮತ್ತು ಕೊಪ್ಪಳ ಜಿಲ್ಲಾ ಕೇಂದ್ರದಿಂದ 25 ಸಾವಿರ ಫಲಾನುಭವಿಗಳನ್ನು ಸೇರಿಸಬೇಕು. ಅದೇ ರೀತಿ ಅನ್ನಭಾಗ್ಯ ಯೋಜನೆಯಡಿ ಜಿಲ್ಲಾ ಕೇಂದ್ರದಿಂದ 15 ಸಾವಿರ ಮತ್ತು ವಿವಿಧ ವಿಧಾನಸಭಾ ಕ್ಷೇತ್ರವಾರು 5 ಸಾವಿರದಂತೆ, ಯುವನಿಧಿ ಯೋಜನೆಯಡಿ ಜಿಲ್ಲೆಯ ಒಂದು ಸಾವಿರ ಹಾಗೂ ಗೃಹಜ್ಯೋತಿ ಯೋಜನೆಯಡಿ ಲಾಭಪಡೆದ ಜಿಲ್ಲೆಯ 10 ಸಾವಿರ ಫಲಾನುಭವಿಗಳನ್ನು ಕರೆ ತರಲು ಸಂಬಂಧಪಟ್ಟ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ನಾಗರಜ ಅರಳಿ ಹಾಗೂ ಮಂಜುನಾಥ ಗೊಂಡಬಾಳ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಹಾಗೂ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರು, ತಾಲ್ಲೂಕಾ ಅಧ್ಯಕ್ಷರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Get real time updates directly on you device, subscribe now.

Leave A Reply

Your email address will not be published.

error: Content is protected !!