ನೂತನವಾಗಿ ಆಯ್ಕೆಯಾದ ನಿರ್ದೇಶಕರಿಗೆ ಸನ್ಮಾನ
ಮಸಬಂಚಿನಾಳ ಪಕ್ಷದ ಕಾರ್ಯಾಲಯದಲ್ಲಿ ಮುಧೋಳ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನವಾಗಿ ಆಯ್ಕೆಯಾದ ನಿರ್ದೇಶಕರಿಗೆ ಹಾಗೂ ಬೇವೂರ ಗ್ರಾಮದಲ್ಲಿ ಅವಿರೋಧವಾಗಿ ಆಯ್ಕೆಯಾದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಮಾಜಿ ಸಚಿವರಾದ ಹಾಲಪ್ಪ ಆಚಾರ್ ಅವರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಶಿವಕುಮಾರ್ ನಾಗಲಾಪುರ ಮಠ, ವೀರಣ್ಣ ಹುಬ್ಬಳ್ಳಿ, ರತನ್ ದೇಸಾಯಿ, ಶಂಬಣ್ಣ ಜೋಳದ ಮತ್ತು ಮುಧೋಳ ಹಾಗೂ ಬೇವೂರ ಗ್ರಾಮದ ಪಕ್ಷದ ಮುಖಂಡರು, ಹಿರಿಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.