ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾಗಿ ರಾಜಶೇಖರಗೌಡ ಆಡೂರ ನೇಮಕ
ಕೊಪ್ಪಳ: ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ರಾಷ್ಟ್ರೀಯ ಆರೋಗ್ಯ ಮಿಷನ್‌ನ ಜಿಲ್ಲಾ/ನಗರ ಮಟ್ಟದ ವಿಜಿಲೆನ್ಸ್ ಮತ್ತು ಮಾನಿಟರಿಂಗ್ ಸಮಿತಿಯ ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾಗಿ ಶ್ರೀ ಗವಿಸಿದ್ದೇಶ್ವರ ಅರ್ಬನ್ ಬ್ಯಾಂಕಿನ ಅಧ್ಯಕ್ಷರು ಹಾಗೂ ನಗರಸಭೆ ಸದಸ್ಯರಾದ ರಾಜಶೇಖರಗೌಡ ಮರಿಗೌಡ ಆಡೂರ ಇವರನ್ನು ನೇಮಕ ಮಾಡಿ ಸದಸ್ಯ ಕಾರ್ಯದರ್ಶಿಗಳು ಹಾಗೂ ಜಿಲ್ಲಾಧಿಕಾರಿ ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿಯವರು ಆದೇಶ ಹೊರಡಿಸಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮಗಳ ಪರಿಶೀಲನೆಗಾಗಿ, ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರನ್ನಾಗಿ ನಾಮ ನಿರ್ದೇಶನಗೊಳಿಸಿ ಆದೇಶಿಸಿದೆ ಎಂದು ತಿಳಿಸಲಾಗಿದೆ.
ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿಯ ನೂತನ ಸದಸ್ಯ ರಾಜಶೇಖರಗೌಡ ಆಡೂರು ಅವರು ನೇಮಕ್ಕೆ ಕಾರಣಿ ಭೂತರಾದ ಸಂಸದ ಕೆ. ರಾಜಶೇಖರ್ ಹಿಟ್ನಾಳ್, ಮಾಜಿ ಸಂಸದ ಸಂಗಣ್ಣ ಕರಡಿ, ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಮಾಜಿ ಶಾಸಕ ಕೆ.ಬಸವರಾಜ್ ಹಿಟ್ನಾಳ್, ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಮರೇಗೌಡ ಪಾಟೀಲ್ ಬಯ್ಯಾಪುರ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರನ್ನು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.