ಸರಸ್ ಮೇಳದಲ್ಲಿ ಭಾಗವಹಿಸುವ ಸ್ವ- ಸಹಾಯ ಸಂಘದ ಸದಸ್ಯರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿ- ಸಿಇಓ ರಾಹುಲ್ ರತ್ನಂ ಪಾಂಡೇಯ

0

Get real time updates directly on you device, subscribe now.

): ಜನವರಿ 15 ರಂದು ನಡೆಯುವ ಶ್ರೀ ಗವಿಸಿದ್ದೇಶ್ವರ ಜಾತ್ರೆಯಲ್ಲಿ ನಡೆಯುವ ಸರಸ್ ಮೇಳದಲ್ಲಿ ಭಾಗವಹಿಸುವ ರಾಜ್ಯದ ವಿವಿಧ ಜಿಲ್ಲೆಯ ಸ್ವ- ಸಹಾಯ ಸಂಘದ ಸದಸ್ಯರಿಗೆ ಸೂಕ್ತ ವ್ಯವಸ್ಥೆ ಮಾಡಿಕೊಡಬೇಕೆಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಹೇಳಿದರು.
 ಅವರು ಗುರುವಾರ ಜಿಲ್ಲಾ ಪಂಚಾಯತ ಸಮಿತಿ ಸಭಾಂಗಣದಲ್ಲಿ ಶ್ರೀ ಗವಿಸಿದ್ದೇಶ್ವರ ಜಾತ್ರೆಯ ಅಂಗವಾಗಿ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಕರೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
ರಾಜ್ಯದ ವಿವಿಧ 16 ಜಿಲ್ಲೆಗಳಿಂದ ಬರುವ ಸ್ವ- ಸಹಾಯ ಸಂಘದ ಸದಸ್ಯರು ಶ್ರೀ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಮಳಿಗೆಗಳನ್ನು ಹಾಕಿ ಅವರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವರು. ಅವರಿಗೆ ಉಳಿದುಕೊಳ್ಳಲು ಸೂಕ್ತ ವಸತಿ ಹಾಗೂ ಊಟೋಪಚಾರದ ವ್ಯವಸ್ಥೆ ಮಾಡಬೇಕು. ಸಮಾಜ ಕಲ್ಯಾಣ ಇಲಾಖೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಅವರಿಗೆ ಉಳಿದುಕೊಳ್ಳಲು ಸೂಕ್ತ ವಸತಿ ವ್ಯವಸ್ಥೆ ಮಾಡಬೇಕೆಂದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸರಸ್ ಮೇಳದ ಮಳಿಗೆಗಳಿಗೆ ಶ್ರೀ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಸೂಕ್ತ ಜಾಗವನ್ನು ನೀಡಿದ್ದಾರೆ. ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಸೇರಿದಂತೆ ಇತರೆ ವಿವಿಧ ಇಲಾಖೆಯ ಮಳಿಗೆಗಳನ್ನು ಸಹ ಹಾಕಲಾಗುತ್ತದೆ. ನಮ್ಮ ಜಿಲ್ಲೆಯ ಸ್ವ- ಸಹಾಯ ಸಂಘದ ಸದಸ್ಯರಿಗಿಂತ ಬೇರೆ ಜಿಲ್ಲೆಯಿಂದ ಬರುವ ನಮ್ಮ ಅತಿಥಿಗಳಿಗೆ ಯಾವುದೇ ಸಮಸ್ಯೆಗಳಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ತಮ್ಮ ಮೇಲಿದೆ ಎಂದು ಹೇಳಿದರು.
ಕಳೆದ ಸಲ ಸ್ವ-ಸಹಾಯ ಸಂಘದ ಸದಸ್ಯರು ಯಾವ- ಯಾವ ವಸತಿ ನಿಲಯಗಳಲ್ಲಿ ಉಳಿದುಕೊಂಡಿದ್ದರು, ಅಲ್ಲಿ ಅವರಿಗೆ ಇರಲು ವ್ಯವಸ್ಥೆ ಮಾಡಿ ಮತ್ತು ಕಳೆದ ಸಲ ಏನಾದರೂ ಸಮಸ್ಯೆಗಳಾಗಿದ್ದರೆ ಅದು ಈ ಸಲ ಮರುಕಳಿಸಿದಂತೆ ನೋಡಿಕೊಳ್ಳಬೇಕು. ಒಂದು ವಸತಿ ನಿಲಯಗಳಲ್ಲಿ ಎಷ್ಟು ಜನ ಇರಬಹುದು ಎಂಬುದರ ಅಂದಾಜು ಪಟ್ಟಿ ತಯಾರಿಸಿ. ಹಾಗೂ ಸ್ವ. ಸಹಾಯ ಸಂಘದ ಎಲ್ಲಾ ಮಳಿಗೆಗಳಲ್ಲಿ ಕ್ಯೂ-ಆರ್ ಕೋಡ ಉಪಯೋಗಿಸುವಂತೆ ನೋಡಿಕೊಳ್ಳಬೇಕು. ಮತ್ತು ತಮ್ಮ ಯಾವುದೇ ಸಲಹೆ ಸೂಚನೆಗಳಿದ್ದರು ತಿಳಿಸಿ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಪ್ರಕಾಶ ವಿ., ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್., ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ, ಲೀಡ್ ಬ್ಯಾಂಕ್ ಮ್ಯಾನೇಜರ್ ವೀರೆಂದ್ರಕುಮಾರ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಕೆ.ಗವಿಶಂಕರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ನಾಗಮಣಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಜ್ಮೀರ ಅಲಿ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಸತಿ ನಿಲಯಗಳ ಮೇಲ್ವಿಚಾರಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. 

Get real time updates directly on you device, subscribe now.

Leave A Reply

Your email address will not be published.

error: Content is protected !!