Get real time updates directly on you device, subscribe now.
ಮುಷ್ಕರದಲ್ಲಿ ಭಾಗವಹಿಸಿದ ಕೊಪ್ಪಳ ಜಿಲ್ಲೆಯ ಆಶಾ ಕಾರ್ಯಕರ್ತೆಯರು ಮರಳಿ ಕರ್ತವ್ಯಕ್ಕೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಲಿಂಗರಾಜು ಟಿ ಅವರು ತಿಳಿಸಿದ್ದಾರೆ.
ಜನವರಿ 7 ರಿಂದ ರಾಜ್ಯ ಮಟ್ಟದಲ್ಲಿ ಆಶಾ ಕಾರ್ಯಕರ್ತೆಯರ ಮುಷ್ಕರ ನಡೆಯುತ್ತಿದ್ದು, ಈ ಮುಷ್ಕರದಲ್ಲಿ ಜಿಲ್ಲೆಯಿಂದ ಆಶಾ ಕಾರ್ಯಕರ್ತೆಯರು ಭಾಗವಹಿಸಿರುತ್ತಾರೆ. ಈಗಾಗಲೆ ಆರೋಗ್ಯ ಸಚಿವರು ತಮ್ಮ ಎಲ್ಲಾ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸುವುದಾಗಿ ತಿಳಿಸಿದ್ದು, ಸಾರ್ವಜನಿಕ ಆರೋಗ್ಯ ಹಿತ ದೃಷ್ಠಿಯಿಂದ ಮುಷ್ಕರದಲ್ಲಿ ಭಾಗವಹಿಸಿದ ಆಶಾ ಕಾರ್ಯಕರ್ತೆಯರು ಈ ಕೂಡಲೆ ಕರ್ತವ್ಯಕ್ಕೆ ಹಾಜರಾಗುವಂತೆ ಈ ಮೂಲಕ ಸೂಚಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
****