ಜಿಲ್ಲಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ರಚನೆ ‘: ಜಿಲ್ಲಾ ಅಧ್ಯಕ್ಷರಾಗಿ ಶೇಖರಗೌಡ ಪಾಟೀಲ್

0

Get real time updates directly on you device, subscribe now.

ಜಂಟಿ ಕೃಷಿ ನಿರ್ದೇಶಕರ ಕಛೇರಿಯ ಸಭಾಂಗಣದಲ್ಲಿ ಗುರುವಾರ ಕೊಪ್ಪಳ ಜಿಲ್ಲಾ ಕೃಷಿಕ ಸಮಾಜದ 2025-26 ರಿಂದ 2029-30ನೇ ಸಾಲಿನ ವರೆಗೆ 5 ವರ್ಷದ ಅವಧಿಗೆ ಚುನಾವಣೆ ನಡೆಸಲಾಗಿದ್ದು, ಜಿಲ್ಲಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ರಚನೆಯಾಗಿದೆ.

ಚುನಾವಣೆ ಅಧಿಕಾರಿಯಾಗಿ ಕೊಪ್ಪಳ ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್ ಅವರು ಚುನಾವಣೆ ಪ್ರಕ್ರಿಯೆ ಕೈಗೊಂಡರು. ಈ ಚುನಾವಣೆಯಲ್ಲಿ ಜಿಲ್ಲಾ ಅಧ್ಯಕ್ಷರಾಗಿ ಕುಷ್ಟಗಿ ತಾಲ್ಲೂಕಿನ ಗುಮಗೇರ ಗ್ರಾಮದ ಶೇಖರಗೌಡ ವಿರುಪಾಕ್ಷಗೌಡ ಮಾಲಿಪಾಟೀಲ, ಜಿಲ್ಲಾ ಉಪಾಧ್ಯಕ್ಷರಾಗಿ ಕನಕಗಿರಿಯ ಸಂಗಪ್ಪ ತಂದೆ ಹಂಪಣ್ಣ, ಪ್ರಧಾನ ಕಾರ್ಯದರ್ಶಿಯಾಗಿ ಕಾರಟಗಿ ತಾಲ್ಲೂಕಿನ ಬೆನ್ನೂರು ಗ್ರಾಮದ ಎಂ.ಚಂದ್ರಶೇಖರಗೌಡ ತಂದೆ ಅಯ್ಯನಗೌಡ, ಖಜಾಂಚಿಯಾಗಿ ಗಂಗಾವತಿ ತಾಲ್ಲೂಕಿನ ಹೇರೂರು ಗ್ರಾಮದ ಅಮರೇಶಪ್ಪ ತಂದೆ ಶಿವಪ್ಪ ಗೋನಾಳ ಹಾಗೂ ರಾಜ್ಯ ಪ್ರತಿನಿಧಿಯಗಿ ಕುಕನೂರ ತಾಲ್ಲೂಕಿನ ತಳಕಲ್ ಗ್ರಾಮದ ಶಿವಪ್ಪ ಗೂಳರಡ್ಡಿ ಮೂಲಿಮನಿ ಇವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ ಎಂದು ಕೊಪ್ಪಳ ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.ಜನವರಿ 20 ರವರೆಗೆ ಯುವನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನ

—-
ಕೊಪ್ಪಳ ಜನವರಿ 09 (ಕರ್ನಾಟಕ ವಾರ್ತೆ): ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ “ಯುವನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನ”ವನ್ನು ಜನವರಿ 20 ರವರೆಗೆ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ಸರಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ ‘ಯುವನಿಧಿ’ ಯೋಜನೆ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಈ ಸಂಬಂಧ 2022-23 ಹಾಗೂ 2023-24ನೇ ಸಾಲಿನಲ್ಲಿ ಪದವಿ/ಡಿಪ್ಲೋಮಾ ತೇರ್ಗಡೆ ಹೊಂದಿದ ನಿರುದ್ಯೋಗ ಅಭ್ಯರ್ಥಿಗಳನ್ನು ‘ಯುವನಿದಿ’ ಯೋಜನೆಯಡಿಯಲ್ಲಿ ನೋಂದಾಯಿಸಿಕೊಳ್ಳಲು  http://sevasindhugs.karnataka.gov.in ಸೇವಾ ಸಿಂಧು ಪೋರ್ಟ್ಲ್‌ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಜನವರಿ 6 ರಿಂದ ಜ.20 ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲೆಯ ಎಲ್ಲಾ ವಿಶ್ವವಿದ್ಯಾಲಯಗಳು, ಸರಕಾರಿ, ಅನುದಾನಿತ ಪದವಿ, ಡಿಪ್ಲೋಮಾ ಹಾಗೂ ತಾಲ್ಲೂಕು ಕಛೇರಿಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಅರ್ಹ ಫಲಾನುಭವಿಗಳು ಈ ಸದಾವಕಾಶವನ್ನು ಉಪಯೋಗಿಸಿಕೊಂಡು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು.
ಪದವೀಧರಿಗೆ ಪ್ರತಿ ತಿಂಗಳು ರೂ. 3000 ಹಾಗೂ ಡಿಪ್ಲೋಮಾ ಪದವೀಧರರಿಗೆ ರೂ. 1500 ನಿರುದ್ಯೋಗಿ ಭತ್ಯೆಯನ್ನು ನೀಡಲಾಗುತ್ತದೆ. ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೂರೈಸಿ ಹೆಸರನ್ನು ನೊಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ. ನಂತರ ಮಾಹೆವಾರು ಯುವನಿಧಿ ಯೋಜನೆಯ ಪ್ರಯೋಜನವನ್ನು ಪಡೆಯಬೇಕಿದ್ದರೆ, ಸೇವಾ ಸಿಂಧು ಪೋರ್ಟ್ಲ್‌ನಲ್ಲಿ ಪ್ರತಿ ತಿಂಗಳು ತಾನು ನಿರುದ್ಯೋಗಿಯೆಂದು, ಉನ್ನತ ವ್ಯಾಸಂಗ ಮುಂದುವರೆಸುತ್ತಿಲ್ಲವೆಂದು ಹಾಗೂ ಸ್ವಯಂ ಉದ್ಯೋಗವಿಲ್ಲವೆಂದು ಪ್ರತಿ ತಿಂಗಳು 25ನೇ ದಿನಾಂಕದೊಳಗಾಗಿ ಸ್ವಯಂ ಘೋಷಣೆ ಆಧಾರದ ಮೇಲೆ ಅಭೈರ್ಥಿಗಳು ಮುಂದಿನ ಪಾವತಿಯನ್ನು ಸ್ವೀಕರಿಸಬಹುದು.
ಅಭ್ಯರ್ಥಿಗಳು ಕರ್ನಾಟಕ ಒನ್/ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಕಡ್ಡಾಯವಾಗಿ ಆಧಾರ ಸೀಡೆಡ್ ಬ್ಯಾಂಕ್ ಖಾತೆ ಹಾಗೂ ಆಧಾರ ಲಿಂಕ್ಡ್ ಮೊಬೈಲ್ ನಂಬರನ್ನು ಹೊಂದಿರಬೇಕು. ಅರ್ಜಿ ಸಲ್ಲಿಸಿದ ನಂತರ ಸೇವಾ ಸಿಂಧು ಪೋರ್ಟ್ಲ್‌ನಲ್ಲಿ ತಮ್ಮ ಅರ್ಜಿಯು ಯಾವ ಹಂತದಲ್ಲಿದೆ ಎಂಬುದನ್ನು ಪರಿಶೀಲಿಸಿಕೊಂಡು, ಒಂದು ವೇಳೆ ಅರ್ಜಿಯು ಅಪ್ರೂವ್‌ವಾಗದ ಸಂದರ್ಭದಲ್ಲಿ ಸೂಚಿಸಲ್ಪಟ್ಟ ಇಲಾಖೆಯ ಕಛೇರಿಗಳಿಗೆ ತಮ್ಮ ಎಲ್ಲಾ ಮೂಲ ಅಂಕಪಟ್ಟಿ ಹಾಗೂ ಇತರೆ ಪ್ರಮಾಣಪತ್ರಗಳೊಂದಿಗೆ ಖುದ್ದಾಗಿ ಭೇಟಿ ನೀಡಿ ಅಫ್ರೂವ್ ಮಾಡಿಸಿಕೊಳ್ಳಬೇಕಾಗಿರುತ್ತದೆ ಎಂದು ಜಿಲ್ಲಾ ಉದ್ಯೋಗ ಮಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
****

Get real time updates directly on you device, subscribe now.

Leave A Reply

Your email address will not be published.

error: Content is protected !!