ಕೊಪ್ಪಳ ಜಿಲ್ಲೆಯ ಜನಪದ ಬೈಗುಳ ಕೃತಿ ಲೋಕಾರ್ಪಣೆ
ಕೊಪ್ಪಳ ಜಿಲ್ಲೆಯ ಜನಪದ ಬೈಗುಳ ಕೃತಿ ಲೋಕಾರ್ಪಣೆ
ಕೊಪ್ಪಳ ಜ. 11: ನಗರದ ಶ್ರೀ ಗವಿಸಿದ್ಧೇಶ್ವರ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಡಾ.ಸಿದ್ಧಲಿಂಗಪ್ಪ ಕೊಟ್ನೆಕಲ್ ಇವರು ಸಂಪಾದಿಸಿ ಪ್ರಕಟಿಸಿರುವ ‘ಕೊಪ್ಪಳ ಜಿಲ್ಲೆಯ ಜನಪದ ಬೈಗುಳ’ ಎಂಬ ಕೃತಿಯು ಜನೆವರಿ 12ರಂದು ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಬಿಡುಗಡೆಗೊಳ್ಳಲಿದೆ. ಈ ಕೃತಿಯನ್ನು ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಪ್ರೊ.ಎಚ್.ಟಿ.ಪೋತೆಯವರು ಲೋಕಾರ್ಪಣೆ ಮಾಡಲಿದ್ದಾರೆ. ಕೃತಿಯ ಕುರಿತು ಕಲಬುರ್ಗಿಯ ನಿವೃತ್ತ ಪ್ರಾಚಾರ್ಯರಾದ ಡಾ.ಶ್ರೀಶೈಲ ನಾಗರಾಳ ಇವರು ಮಾತನಾಡಲಿದ್ದಾರೆ. ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ.ಅರ್ಜುನ ಗೊಳಸಂಗಿಯವರು ಅಭಿನಂದನಾ ಮಾತುಗಳನ್ನಾಡಲಿದ್ದಾರೆ. ಬಂಡಾಯ ಸಾಹಿತಿಗಳಾದ ಪ್ರೊ.ಅಲ್ಲಮಪ್ರಭು ಬೆಟ್ಟದೂರುರವರು ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಹಿರಿಯ ಸಾಹಿತಿ ಡಾ.ಮಹಾಂತೇಶ ಮಲ್ಲನಗೌಡರ್ ಹಾಗೂ ವಿಶ್ರಾಂತ ಸಿಂಡಿಕೇಟ್ ಸದಸ್ಯರಾದ ಡಾ.ಬಸವರಾಜ ಪೂಜಾರರವರು ಭಾಗವಸಿಲಿದ್ದಾರೆ ಮತ್ತು ಕೃತಿಕಾರರಾದ ಡಾ.ಸಿದ್ಧಲಿಂಗಪ್ಪ ಕೊಟ್ನೆಕಲ್‌ರವರು ಉಪಸ್ಥಿತಿ ಇರಲಿದ್ದಾರೆಂದು ಮೇಘನಾ ಪ್ರಕಾಶನದ ಪ್ರಕಾಶಕರಾದ ಶ್ರೀಮತಿ ಮಂಜುಳಾ ಕೊಟ್ನೆಕಲ್‌ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.