ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಸಿ ನೆಡೆಯುವ ಕಾರ್ಯಕ್ರಮ: ಚಾಲನೆ

0

Get real time updates directly on you device, subscribe now.

  ಕೊಪ್ಪಳ ನಗರದ ಹಸಿರೀಕರಣಕ್ಕಾಗಿ ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಿಂದ ಹಮ್ಮಿಕೊಂಡ ಸಸಿ ನಡೆಯುವ ಕಾರ್ಯಕ್ರಮಕ್ಕೆ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮಿಜಿ ಹಾಗೂ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ ಅವರು ಶುಕ್ರವಾರ ಜಿಲ್ಲಾಡಳಿತ ಭವನದ ಕಛೇರಿ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ಚಾಲನೆ ನೀಡಿದರು.

 ಕೊಪ್ಪಳ ನಗರದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯ ಮಧ್ಯದಲ್ಲಿ ಫಾಕ್ಸ್ಟೇಲ್ ಪಾಮ್ ಗಿಡಗಳನ್ನು ಜಿಲ್ಲಾಡಳಿ ಭವನದಿಂದ ಗದಗ ರಸ್ತೆಯ ಮಳೆ ಮಲ್ಲೇಶ್ವರ ದೇವಸ್ಥಾನದವರೆಗೆ ಹಾಗೂ ಗವಿಮಠ ರಸ್ತೆಯ ಮಧ್ಯದಲ್ಲಿರುವ ಡಿವೈಡರ್‌ನಲ್ಲಿ ಅಲಂಕಾರಿಕ ಸಸಿಗಳನ್ನು ನೆಡೆಯುವ ಉದ್ದೇಶದೊಂದಿಗೆ ನಗರಾಭಿವೃದ್ಧಿ ಪ್ರಾಧಿಕಾರವು ಈ ಕಾರ್ಯಕ್ರಮ ಹಮ್ಮಿಕೊಂಡಿದೆ.
ಈ ಸಂದರ್ಭದಲ್ಲಿ ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀನಿವಾಸ ಗುಪ್ತಾ, ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್ ಅರಸಿದ್ದಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಯೋಗಾನಂದ ಸೇರಿದಂತೆ ವಿವಿಧ ಇಲಾಖೆಗಳ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Get real time updates directly on you device, subscribe now.

Leave A Reply

Your email address will not be published.

error: Content is protected !!