ಪ್ರತಿಭಾವಂತ ಕ್ರೀಡಾಪಟುಗಳಿಗೆ ನಗದು ಬಹುಮಾನಕ್ಕಾಗಿ ಅರ್ಜಿ ಆಹ್ವಾನ

0

Get real time updates directly on you device, subscribe now.

ವಿವಿಧ ಕ್ರೀಡೆಗಳಲ್ಲಿ ರಾಜ್ಯ, ರಾಷ್ಟ್ರೀಯ ಅಥವಾ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಪದಕ ವಿಜೇತರಾದ ಪ್ರತಿಭಾವಂತ ಕ್ರೀಡಾಪಟುಗಳಿಗೆ ನಗದು ಬಹುಮಾನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
 ಪ್ರತಿ ವರ್ಷದಂತೆ ಈ ವರ್ಷವೂ ಸಹಿತ 2024-25ನೇ ಸಾಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸುವ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಪದಕ ಪಡೆದ ಕೊಪ್ಪಳ ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳಿಗೆ ಧನ ಸಹಾಯ ನೀಡಲಾಗುತ್ತಿದ್ದು, ರಾಜ್ಯ, ರಾಷ್ಟ್ರೀಯ,  ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಪದಕ ವಿಜೇತರಾದ ಪ್ರತಿಭಾವಂತ ಕ್ರೀಡಾಪಟುಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
 ಅರ್ಜಿ ಸಲ್ಲಿಸಲಿಚ್ಛೀಸುವ ಕ್ರೀಡಾಪಟುಗಳು ತಮ್ಮ ಸೂಕ್ತ ದಾಖಲೆಗಳೊಂದಿಗೆ ಪ್ರಸ್ತಾವನೆಯನ್ನು ಜನವರಿ 24 ರೊಳಗಾಗಿ ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ. ಜಿಲ್ಲಾ ಕ್ರೀಡಾಂಗಣ, ಕೊಪ್ಪಳ ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಥ್ಲೆಟಿಕ್ಸ್ ತರಬೇತುದಾರರಾದ ವಿಶ್ವನಾಥ ಕರ್ಲಿ ಮೊ.ಸಂ: 9620084611 ಇವರಿಗೆ ಸಂಪರ್ಕಿಸುವಂತೆ ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Leave A Reply

Your email address will not be published.

error: Content is protected !!