ಜಾನಪದ ನೃತ್ಯ ಕಾರ್ಯಕ್ರಮ: ಮಕ್ಕಳಿಗೆ ಪ್ರಮಾಣ ಪತ್ರ ವಿತರಣೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಗಂಗಪ್ಪ ಅವರು ಮಾತನಾಡಿ, ಮಕ್ಕಳು ಪಠ್ಯೇದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಲು ಇಂತಹ ಕಾರ್ಯಕ್ರಮವು ಸಹಕಾರಿಯಾಗಿದೆ ಎಂದು ಹೇಳಿದರು.
ಸಿ.ಆರ್.ಪಿ ರೇವಣಸಿದ್ದಪ್ಪ ಅವರು ಮಾತನಾಡಿ, ಇಂತಹ ಸ್ಪರ್ಧೆಗಳು ಮಕ್ಕಳಿಗೆ ವ್ಯಕ್ತಿತ್ವ ವಿಕಾಸನ ಗೊಳಿಸಲು ಸಹಕಾರಿಯಾಗಿವೆ ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಅನ್ನಪೂರ್ಣ ಭೀ ಕುಬಕಡ್ಡಿ ಅವರು ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ನೆರವೇರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಮುಖ್ಯೋಪಾಧ್ಯಯರಾದ ನಾಗರತ್ನ ಹವಳೆ ಅವರು ವಹಿಸಿದ್ದರು. ಜಿಲ್ಲಾ ಬಾಲ ಭವನ ಕಾರ್ಯಕ್ರಮ ಸಂಯೋಜಕ ಮೆಹಬೂಬ ಸಾಬ್ ಇಲಾಹಿ ಕಾರ್ಯಕ್ರಮದ ನಿರೂಪಿಸಿದರು. ಶಾಲೆಯ ಸಹ ಶಿಕ್ಷಕಿ ಜಲಜಾಕ್ಷಿ ಅವರು ಸ್ವಾಗತಿಸಿದರು. ಮಾರುತಿ ಕಂಪ್ಲಿ ಅವರು ವಂದಿಸಿದರು. ಈ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರ ವೃಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಬ್ಬಂದಿ ವರ್ಗ ಹಾಗೂ ಶಾಲೆಯ ಎಲ್ಲಾ ಮಕ್ಕಳು ಭಾಗವಹಿಸಿದ್ದರು.
****
Comments are closed.