ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ: ಸಿ.ಎಂ.ಬಣ್ಣನೆ

0

Get real time updates directly on you device, subscribe now.

ಕಂಬಳ ಅತ್ಯಂತ ಜನಪ್ರಿಯ ಗ್ರಾಮೀಣ ಕ್ರೀಡೆ: ಸಿ.ಎಂ.ಸಿದ್ದರಾಮಯ್ಯ

ನಮ್ಮ ದೇಶ ಬಹುತ್ವದ ದೇಶ: ಸಿಎಂ

ಮಂಗಳೂರು ಜ 11:
ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ.‌ ನಮ್ಮ ದೇಶ ಬಹುತ್ವದ ದೇಶ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು.

ಉಳ್ಳಾಲ ನರಿಂಗಾನದ ಮೂರನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಜನಪದ ಕ್ರೀಡೆ ಕಂಬಳ ಸರ್ವ ಜಾತಿ ಧರ್ಮದ ಜನಸಮುದಾಯವನ್ನು ಬೆಸೆಯುವಂತೆ ಮಾಡುತ್ತಿದೆ.

ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಭಾರತ ಸಂಸ್ಕೃತಿಯ ಒಂದು ಭಾಗ ಕರಾವಳಿ ಜಿಲ್ಲೆಗಳ ಸಂಸ್ಕೃತಿಯಾಗಿದೆ. ನಮ್ಮ ಸರ್ಕಾರ ಕೂಡ ಎಲ್ಲಾ ಜಾತಿ, ಎಲ್ಲಾ ಧರ್ಮದ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಮಹಿಳೆಯರಿಗೆ ಆರ್ಥಿಕ ಶಕ್ತಿ ಕೊಡುವ ಮೂಲಕ‌ ಕುಟುಂಬಗಳ ಮತ್ತು ಮಹಿಳಾ ಸಮಾಜದ ಆರ್ಥಿಕ‌ ಶಕ್ತಿಯನ್ನು ಹೆಚ್ಚಿಸುವ ಕಾರ್ಯಕ್ರಮಗಳನ್ನು ಇಡೀ ದೇಶದಲ್ಲಿ ಮೊದಲಿಗೆ ಕೊಟ್ಟಿದ್ದು ನಮ್ಮ ಸರ್ಕಾರ. ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ ಅವರು ಪ್ರತಿಭಟನೆ ಹಿಂತೆಗೆದುಕೊಳ್ಳುವಂತೆ ಮಾಡಿದ್ದು ನಮ್ಮ ಸರ್ಕಾರ. ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ 10 ಸಾವಿರ ಸಿಗುವಂತೆ ಮಾಡುವ ಜವಾಬ್ದಾರಿಯನ್ನು ನಮ್ಮ ಸರ್ಕಾರ ವಹಿಸಿಕೊಂಡಿದೆ ಎಂದರು.

ಸುಪ್ರೀಂಕೋರ್ಟ್ ನಿಷೇಧಿಸಿದ್ದ ಕಂಬಳ ಕ್ರೀಡೆಗೆ ಮರು ಚಾಲನೆ ಸಿಗುವಂತೆ ಮಾಡಿದ್ದು ನಮ್ಮ ಸರ್ಕಾರ. ಸುಪ್ರೀಂಕೋರ್ಟ್ ನಿಷೇಧವನ್ನು ತೆರವುಗೊಳಿಸಲು ಸರ್ಕಾರ ಶ್ರಮಿಸಿತು. ಇದು ಕರಾವಳಿಯ ಜನಪದ ಸಂಸ್ಕೃತಿಗೆ ನಮ್ಮ ಸರ್ಕಾರ ಕೊಟ್ಟ ಕೊಡುಗೆ ಎಂದರು.

ತಮ್ಮ ಮನೆ ಮಕ್ಕಳಂತೆ ಕೋಣಗಳನ್ನು ಸಾಕುತ್ತಾರೆ. ಕಂಬಳ ಕ್ರೀಡೆ ಜಿಲ್ಲೆಯ ಜನಪದ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಹೀಗಾಗಿ ಈ ಸಾಂಪ್ರದಾಯಿಕ ಕ್ರೀಡೆಯನ್ನು ಉಳಿಸಲು ನಾನು ಮುಂದಾದೆ ಎಂದರು.

24 ಕಂಬಳಗಳನ್ನು ನಡೆಸಲು ಪ್ರತೀ ಕಂಬಳಕ್ಕೆ ತಲಾ 5 ಲಕ್ಷ ರೂಪಾಯಿ ನೆರವನ್ನು ನಮ್ಮ ಸರ್ಕರ ನೀಡಿದೆ.

ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಚಿವ ರಹೀಂ ಖಾನ್ ಸೇರಿ ಹಲವು ಪ್ರಮುಖರು, ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

 

ತುಳು ಎರಡನೇ ಭಾಷೆ: ಸರ್ಕಾರ ಪರಿಗಣಿಸುತ್ತದೆ

ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರ ಬೇಡಿಕೆಯಂತೆ ತುಳು ಭಾಷೆಯನ್ನು ಎರಡನೇ ರಾಜ್ಯ ಭಾಷೆಯನ್ನಾಗಿ ಪರಿಗಣಿಸುವ ಬಗ್ಗೆ ಗಂಭೀರವಾಗಿ ಚಿಂತಿಸಲಾಗುವುದು ಎಂದರು.

 

ರಾಜಕಾರಣದಲ್ಲಿ ಯಾವುದೂ ಶಾಶ್ವತ ಅಲ್ಲ

ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಯು.ಟಿ.ಖಾದರ್ ಅವರು ಸ್ಪೀಕರ್ ಆಗುವ ಮೂಲಕ ಪ್ರೋಟೋಕಾಲ್ ಪ್ರಕಾರ ನನಗಿಂತ ಎತ್ತರದಲ್ಲಿದ್ದಾರೆ. ಮುಂದೆ ಇದಕ್ಕಿಂತ ಒಳ್ಳೆಯ ಅವಕಾಶಗಳು ಸಿಗಬಹುದು. ರಾಜಕಾರಣದಲ್ಲಿ ಯಾವುದೂ ಶಾಶ್ವತ ಅಲ್ಲ ಎಂದರು.

ಯು.ಟಿ.ಖಾದರ್ ಅವರು ಸ್ಪೀಕರ್ ಆದ ಬಳಿಕ ತಮ್ಮ ಕ್ಷೇತ್ರದ ಅಭಿವೃದ್ಧಿಗೆ 1000 ಕೋಟಿಯಷ್ಟು ಅನುದಾನ ತಂದಿದ್ದಾರೆ. ಕ್ಷೇತ್ರದ ಬಗ್ಗೆ ಅಷ್ಟೊಂದು ಪ್ರೀತಿ ಇದೆ ಖಾದರ್ ಅವರಿಗೆ ಎಂದರು.

Get real time updates directly on you device, subscribe now.

Leave A Reply

Your email address will not be published.

error: Content is protected !!