Get real time updates directly on you device, subscribe now.
: ಜಲ ಶಕ್ತಿ ಮತ್ತು ರೈಲ್ವೆ ಖಾತೆಯ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ಜನವರಿ 14 ರಂದು ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಅಂದು ಬೆಳಿಗ್ಗೆ 6 ಗಂಟೆಗೆ ರೈಲ್ವೇ ಮೂಲಕ ಕೊಪ್ಪಳಕ್ಕೆ ಆಗಮಿಸುವರು. ನಂತರ ಬೆಳಿಗ್ಗೆ 9 ಗಂಟೆಗೆ ಶ್ರೀ ಗವಿಮಠಕ್ಕೆ ಭೇಟಿ ನೀಡುವರು. ಬೆಳಿಗ್ಗೆ 10.30ಕ್ಕೆ ಕೊಪ್ಪಳ ನಗರದ ಕುಷ್ಟಗಿ ರಸ್ತೆಯ ರೈಲ್ವೆ ಮೇಲ್ಸೇತುವೆ ಉದ್ಘಾಟನೆ ಕಾರ್ಯಕ್ರಮ ನೆರವೇರಿಸಿದ ಬಳಿಕ ಕೊಪ್ಪಳ ರೈಲು ನಿಲ್ದಾಣದಲ್ಲಿ ನಡೆಯುತ್ತಿರುವ ಅಮೃತ ಭಾರತ್ ಸ್ಟೇಷನ್ ಕಾಮಗಾರಿಯ ಪರಿಶೀಲನೆ ನಡೆಸಿ, ಅಂದು ಮಧ್ಯಾಹ್ನ 12 ಗಂಟೆಗೆ ಕೊಪ್ಪಳದಿಂದ ಬಾಗಲಕೋಟೆ ಜಿಲ್ಲೆಗೆ ಪ್ರಯಾಣ ಬೆಳಸುವರು ಎಂದು ರೈಲ್ವೆ ರಾಜ್ಯ ಸಚಿವರ ವಿಭಾಗೀಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.