ಜ. 18 ರಂದು ಕೊಪ್ಪಳ ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

Get real time updates directly on you device, subscribe now.

ಕೊಪ್ಪಳ ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಜನವರಿ 18 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ತಾಲೂಕ ಪಂಚಾಯತಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಕೊಪ್ಪಳ ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ ಬಾಲಚಂದ್ರನ್ ಸ್ಯಾಮುವೆಲ್ ಅವರು ವಹಿಸುವರು. ಸಭೆಯಲ್ಲಿ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಯಲಿದ್ದು, ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಾಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಪ್ರತಿನಿಧಿಗಳನ್ನು ನಿಯೋಜಿಸದೇ ಖುದ್ದಾಗಿ ಸಭೆಗೆ ಹಾಜರಾಗುವಂತೆ ಕೊಪ್ಪಳ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!