ಮತದಾರರಲ್ಲಿ ಅರಿವು ಮೂಡಿಸುವ ಕೆಲಸ ಇನ್ನೂ ಹೆಚ್ಚಿನ ರೀತಿಯಲ್ಲಿ ಆಗಬೇಕಿದೆ- ಸಿಇಓ ರಾಹುಲ್ ರತ್ನಂ ಪಾಂಡೇಯ
ಮತದಾರರ ಜಾಗೃತಿ ಕುರಿತು ಇನ್ನೂ ಹೆಚ್ಚಿನ ರೀತಿಯಲ್ಲಿ ಅರಿವು ಮೂಡಿಸುವ ಕೆಲಸ ಆಗಬೇಕಿದೆ ಹಾಗಾಗಿ ಪ್ರತಿ ವರ್ಷ ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಹೇಳಿದರು.
ಅವರು ಶುಕ್ರವಾರ ಜಿಲ್ಲಾ ಪಂಚಾಯತ ಸಮಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಕರೆದ 15ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
ಜನವರಿ 25 ರಂದು ಬೆಳಿಗ್ಗೆ 10 ಗಂಟೆಗೆ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ 15ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉತ್ತಮ ರೀತಿಯಲ್ಲಿ ಆಯೋಜನೆ ಮಾಡಬೇಕು. ಅಂದು ಬೆಳಿಗ್ಗೆ 9 ಗಂಟೆಗೆ ಕೊಪ್ಪಳ ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ಮತದಾರರ ಜಾಗೃತಿ ಕುರಿತು ಬೃಹತ್ ಮಾನವ ಸರಪಳಿ ನಿರ್ಮಿಸಬೇಕು. ಮತದಾರರ ಜಾಗೃತಿ ಕಾರ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಬಿಎಲ್‌ಓ ಹಾಗೂ ಸುಪರವೈಜರ್ ಮತ್ತು ಇ.ಎಲ್.ಸಿ ಸಂಯೋಜಕರು ಸೇರಿದಂತೆ ಇತರರಿಗೆ ಸನ್ಮಾನಿಸಬೇಕು. ಶೇ. 100 ಪ್ರತಿಶತ ಮತದಾನವಾದ ಜಿಲ್ಲೆಯ ಯಾವುದಾದರೂ ತಾಂಡಾ ಹಾಗೂ ಗ್ರಾಮಗಳಿದ್ದರೆ ಅಂತವುಗಳನ್ನು ಗುರುತಿಸಿ ಎಂದು ಹೇಳಿದರು.
ಈ ವರ್ಷ `ಮತದಾನಕ್ಕಿಂತ ಇನ್ನೊಂದಿಲ್ಲ. ನಾನು ಖಚಿತವಾಗಿ ಮತದಾನ ಮಾಡುವೆ’ ಎಂಬ ವಿಶೇಷ ಧ್ಯೇಯವಾಕ್ಯದೊಂದಿಗೆ 15ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ 2025ರ ಜನವರಿ 25 ರಂದು ಆಚರಿಸುವ ಸಂಬAದ ಭಾರತ ಚುನಾವಣಾ ಆಯೋಗ ನಿರ್ದೆಶನ ನೀಡಿದ್ದು, ಈ ಸಂಬAಧ ಜಿಲ್ಲಾ, ತಾಲ್ಲೂಕು ಮತ್ತು ಮತಗಟ್ಟೆಗಳ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಬೇಕೆಂದು ಹೇಳಿದರು.
ವಿವಿಧ ಶೈಕ್ಷಣಿಕ ಸಂಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳು, ಎನ್.ಸಿ.ಸಿ., ಎನ್.ಎಸ್.ಎಸ್. ಮತ್ತು ಸ್ಕೌಟ್ ಗೈಡ್ ಸೇರಿದಂತೆ ಇತರರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು. ಈ. ಕುರಿತು ಕ್ಷೇತ್ರ ಕಾರ್ಯಕ್ರಮ ಹಾಗೂ ಪರಸ್ಪರ ಸಂವಹನದ ಮೂಲಕ ವ್ಯಾಪಕ ಪ್ರಚಾರ ಹಮ್ಮಿಕೊಳ್ಳಬೇಕು. ವಿಶೇಷವಾಗಿ ಹೆಚ್ಚಿನ ಜನರು ಸೇರುವ ಜನ ಸಂದಣಿಯAತಹ ಸ್ಥಳಗಳಲ್ಲಿ ಹೆಚ್ಚಿನ ಪ್ರಚಾರ ಆಗಬೇಕು ಮತ್ತು ಹೊಸದಾಗಿ ನೊಂದಣಿಯಾದ ಯುವ ಮತದಾರರಿಗೆ ಕಾರ್ಯಕ್ರಮದಲ್ಲಿ ಮತದಾರರ ಗುರುತಿನ ಚೀಟಿ ವಿತರಿಸಬೇಕು. ಮತದಾರರ ಜಾಗೃತಿ ಕುರಿತ ಪ್ರತಿಜ್ಞಾ ವಿಧಿಯನ್ನು ಭೋದಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ಪಂಚಾಯತ ಯೋಜನಾ ನಿರ್ದೆಶಕ ಪ್ರಕಾಶ ವಡ್ಡರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೆಶಕ ಶ್ರೀಶೈಲ್ ಬಿರಾದರ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ್, ಕೊಪ್ಪಳ ತಹಶಿಲ್ದಾರ ವಿಠ್ಠಲ್ ಚೌಗಲಾ, ಕೊಪ್ಪಳ ತಾ.ಪಂ ಇಓ ದುಂಡಪ್ಪ ತುರಾದಿ ಹಾಗೂ ಸ್ನಾತಕೋತ್ತರ, ವೈದ್ಯಕೀಯ, ತಾಂತ್ರಿಕ, ಡಿಪ್ಲೊಮಾ ವಿಭಾಗ ಹಾಗೂ ಪದವಿಪೂರ್ವ ಮತ್ತು ಪದವಿ ಹಂತದ ಇ.ಎಲ್.ಸಿ ಕೋಆರ್ಡಿನೇಟರಗಳು ಭಾಗವಹಿಸಿದ್ದರು.