ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಎಲ್ಲರೂ ಮಾಡಿಸಿ- ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ
: ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆಗಳನ್ನು ಸರಕಾರಿ ನೌಕರರು ಕಡ್ಡಾಯವಾಗಿ ಎಲ್ಲರೂ ಮಾಡಿಸಬೇಕೆಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.
ಎಸ್.ಬಿ. ಐ ಬ್ಯಾಂಕಿನ ಎಲ್.ಡಿ.ಎಮ್ ವಿರೇಂದ್ರ ಕುಮಾರ್ ಮಾತನಾಡಿ ನಮ್ಮನ್ನು ನಂಬಿದವರಿಗೆ ಸೆಕ್ಯುರಿಟಿ ಇಟ್ಟು
ಸಾಯಬೇಕು ವಿಶೇಷವಾಗಿ ಹಳ್ಳಿಗಾಡಿನ ಜನರಿಗೆ ಈ ಯೋಜನೆಗಳಿಂದ ತುಂಬಾ ಉಪಯೋಗವಾಗಲಿದೆ. ಕಡಿಮೆ ಪ್ರಿಮಿಯಂ ಕಟ್ಟಿದರೆ ಸಾಕು ಇದರ ಲಾಭ ಸಿಗಲಿದೆ. ಇದಕ್ಕೆ ಭಾರತ ದೇಶದ ಎಲ್ಲಾ ನಾಗರಿಕರು ಅರ್ಹರು. ಯಾವುದೇ ಬ್ಯಾಂಕಿನಲ್ಲಿ ತಮ್ಮ ಅಕೌಂಟ್ ಇದ್ದರೆ ಅಟೊ ಡೆಬಿಟ್ ಆಗುತ್ತದೆ. 18 ವರ್ಷ ಮೇಲ್ಪಟ್ಟ ಎಲ್ಲರೂ ಈ ಪಾಲಿಸಿ ಮಾಡಿಕೊಳ್ಳಲು ಹೇಳಬೇಕು ಈ ಕುರಿತು ತಮ್ಮ ಅಕ್ಕಪಕ್ಕದವರಿಗೂ ಮಾಹಿತಿ ನೀಡಿ. ಇದರ ರಾಜ್ಯದ ಗುರಿ 22 ಪ್ರತಿಶತ ಆಗಿದ್ದು ನಮ್ಮ ಜಿಲ್ಲೆಯಲ್ಲಿ 23 ಪ್ರತಿಶತ ಆಗಿದೆ ಬರುವ ದಿನಗಳಲ್ಲಿ ಇನ್ನೂ ಹೆಚ್ಚಿಗೆ ಆಗಬೇಕಿದೆ ಎಂದು ಹೇಳಿದರು.
ಈ ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೆಶಕರಾದ ರೇಷ್ಮಾ ಹಾನಗಲ್, ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಕೃಷ್ಣಮೂರ್ತಿ ದೇಸಾಯಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕರಾದ ಕೊಟ್ರೇಶ ಮರಬನಳ್ಳಿ, ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಉಪನಿರ್ದೆಶಕರಾದ ಜಗದೀಶ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೆಶಕರಾದ ನಾಗರಾಜ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.