ಸಂವಿಧಾನ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

0

Get real time updates directly on you device, subscribe now.

ಸಂವಿಧಾನದವನ್ನು ನಾವು ರಕ್ಷಿಸಿದರೆ, ಸಂವಿಧಾನ ಭಾರತೀಯರನ್ನು ರಕ್ಷಿಸುತ್ತದೆ.

ಬೆಳಗಾವಿ, ಜನವರಿ 20: ಜನರಲ್ಲಿ ಮಹಾತ್ಮಾ ಗಾಂಧೀಜಿ,ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರಸ್ತುತತೆ ಬಗ್ಗೆ ಅರಿವು ಮೂಡಬೇಕು. ಸಂವಿಧಾನ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ ಎನ್ನುವುದು ತಿಳಿಯಬೇಕು. ಸಂವಿಧಾನದವನ್ನು ನಾವು ರಕ್ಷಿಸಿದರೆ, ಸಂವಿಧಾನ ಭಾರತೀಯರನ್ನು ರಕ್ಷಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

1924 ರ ಇಸವಿಯಲ್ಲಿ ಬೆಳಗಾವಿಯಲ್ಲಿ ಡಿಸೆಂಬರ್ ನಲ್ಲಿ ಕಾಂಗ್ರೆಸ್ ಅಧಿವೇಶನ ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದಿತ್ತು.

ಸಮಾವೇಶ ಯಶಸ್ವಿಯಾಗಲಿದೆ
ಗಾಂಧೀಜಿಯವರು ಡಿಸೆಂಬರ್ 26, 1924 ರಲ್ಲಿ ಕಾಂಗ್ರೆಸ್ ಬೆಳಗಾವಿಯಲ್ಲಿಯೇ ಕಾಂಗ್ರೆಸ್ ಅಧ್ಯಕ್ಷರಾದರು. ಅಧಿವೇಶ ನಡೆದು ಒಂದು ಶತಮಾನವಾಗಿರುವ ಹಿನ್ನೆಲೆಯಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ಎಲ್ಲಾ ಸಿದ್ಧತೆಗಳು ನಡೆದಿದ್ದು, ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೀವಾಲ ಅವರೊಂದಿಗೆ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಕಳೆದ ನಾಲ್ಕೈದು ದಿನಗಳಿಂದ ಇಲ್ಲೇ ಇದ್ದು ಅಚ್ಚುಕಟ್ಟಾಗಿ ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ನಾಳೆಯೂ ಸಮಾವೇಶ ಯಶಸ್ವಿಯಾಗಿ ನಡೆಯಲಿದೆ ಎಂದು ಭರವಸೆ ವ್ಯಕ್ತಪಡಿಸಿದರು. ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಜನ ಇಲ್ಲಿ ಸೇರಲಿದ್ದಾರೆ. ಬೆಳಗಾವಿಯಲ್ಲಿ ಇದು ಐತಿಹಾಸಿಕ ಸಮಾವೇಶವಾಗಲಿದೆ ಎಂದರು.

ಶತಮಾನೋತ್ಸವದ ಸ್ಮರಣಾರ್ಥ ಸಮಾವೇಶ

ಬೆಳಗಾವಿಗೆ ಕೊಡುಗೆ ಘೋಷಣೆ ಮಾಡುವ ಸಮಾವೇಶ ಅಲ್ಲ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಇದು ನೂರು ವರ್ಷಗಳ ಹಿಂದೆ ನಡೆದಿದ್ದ ಅಧಿವೇಶನದ ಜ್ಞಾಪಕಾರ್ಥವಾಗಿ ನಡೆಯುತ್ತಿರುವ ಕಾರ್ಯಕ್ರಮ ಎಂದರು.

ಬೆಳಗಾವಿಯಲ್ಲಿ ನಾಳೆ ಒಂದು ಗಂಟೆಗೆ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಯಲಿದ್ದು, ಈ ಸಮಾವೇಶ ಕಳೆದ ಡಿಸೆಂಬರ್ 27 ರಂದು ನಡೆಯಬೇಕಿತ್ತು. ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ಅವರು ನಿಧನರಾದ ಹಿನ್ನೆಲೆಯಲ್ಲಿ ಕಾರ್ಯಕ್ರಮ ಮುಂದೂಡಲ್ಪಟ್ಟಿತ್ತು ಎಂದು ವಿವರಿಸಿದರು.

ಪ್ರಹ್ಲಾದ್ ಜೋಶಿಗೆ ಇತಿಹಾಸದ ಬಗ್ಗೆ ತಿಳಿದಿಲ್ಲ
ಕಾಂಗ್ರೆಸ್ ನವರು ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದು, ಅಧಿವೇಶನ ನಡೆಸಲು ಹಕ್ಕಿಲ್ಲ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಪ್ರಹ್ಲಾದ್ ಜೋಶಿ ಅವರಿಗೆ ಇತಿಹಾಸ ಗೊತ್ತಿಲ್ಲ. ಗೋಲ್ವಾಲ್ಕರ್, ಹಾಗೂ ಸಾವರ್ಕರ್ ಸಂವಿಧಾನ ಜಾರಿಯಾದಾಗ ಏನು ಮಾತನಾಡಿದ್ದರು ಎಂದು ತಿಳಿದಿದೆಯೇ ಅವರಿಗೆ ಎಂದು ಪ್ರಶ್ನಿಸಿದರು.

ಪಕ್ಷದ ವತಿಯಿಂದ ಸಮಾವೇಶ
ಸಮಾವೇಶವನ್ನು ಪಕ್ಷದ ವತಿಯಿಂದ ಕೈಗೊಂಡಿದ್ದು, ಪ್ರತಿಮೆ ಅನಾವರಣವನ್ನು ಸರ್ಕಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಗಳು ಸ್ಪಷ್ಟಪಡಿಸಿದರು.

ಯತ್ನಾಳ್ ಇತಿಹಾಸ ಓದಿಕೊಂಡಿಲ್ಲ
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಗೋಡ್ಸೆ ಹತ್ಯೆಯಲ್ಲಿ ನೆಹರೂ ಅವರ ಪಾತ್ರವಿದೆ ಎಂದಿರುವ ಬಗ್ಗೆ ಮಾತನಾಡಿ ಅವರಿಗೆ ಇತಿಹಾಸ ತಿಳಿದಿಲ್ಲ ಹಾಗೂ ಅದನ್ನು ಓದಿಯೂ ಇಲ್ಲ ಎಂದರು. ಅದಕ್ಕಾಗಿಯೇ ಅಂಬೇಡ್ಕರ್ ಅವರು ಇತಿಹಾಸ ಗೊತ್ತಿಲ್ಲದವರು ಭವಿಷ್ಯವನ್ನು ಸೃಷ್ಟಿಸಲಾರರು ಎಂದು ಹೇಳಿದ್ದರು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮಹಾತ್ಮಾ ಗಾಂಧಿ ಅವರನ್ನು ಗೋಡ್ಸೆ ಕೊಂದಿದ್ದು, ಆತನ ಜೊತೆ ಸಾವರ್ಕರ್ ಕೂಡ ಶಾಮೀಲಾಗಿರುವ ಬಗ್ಗೆ ಪ್ರಕರಣವಿತ್ತು ಎಂದು ಮುಖ್ಯಮಂತ್ರಿಗಳು ತಿಳಿಸಿದರು .

Get real time updates directly on you device, subscribe now.

Leave A Reply

Your email address will not be published.

error: Content is protected !!