ಕೊಪ್ಪಳ ಜಿಲ್ಲಾ ಪೌರ ನೌಕರರ ಸಂಘದ ಅಧ್ಯಕ್ಷರಾಗಿ ಶಿವಕುಮಾರ್ ಕಟ್ಟಿಮನಿ ನೇಮಕ
ಕೊಪ್ಪಳ : ಕೊಪ್ಪಳ ಜಿಲ್ಲಾ ಪೌರ ನೌಕರರ ಸಂಘದ ಅಧ್ಯಕ್ಷರಾಗಿ ಶಿವಕುಮಾರ್ ಕಟ್ಟಿಮನಿ ಅವರನ್ನು ರಾಜ್ಯ ಪೌರ ನೌಕರರ ಸಂಘದ ರಾಜ್ಯಾಧ್ಯಕ್ಷ ಕೆ. ಪ್ರಭಾಕರ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಆದೇಶ ಪ್ರತಿಯಲ್ಲಿ ಬೈಲಾ ನಿಯಮಾವಳಿ ಪ್ರಕಾರ ನನಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕೊಪ್ಪಳ ಜಿಲ್ಲೆಯ ರಾಜ್ಯ ಪೌರ ನೌಕರರ ಸಂಘದ ಶಿವಕುಮಾರ ಕಟ್ಟಿಮನಿ ನಿಮ್ಮನ್ನು ಕೊಪ್ಪಳ ಜಿಲ್ಲಾ ಸಂಘದ ಅಧ್ಯಕ್ಷನಾಗಿ ಮಾಡಲು ನಾನು ಹರಸುತ್ತೇನೆ.
ತಾವುಗಳು ಈ ಹಿಂದೆ ಜಿ.ಎಸ್.ಮಂಜುನಾಥರವರ ನೇತೃತ್ವದ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಕೊಪ್ಪಳ ಜಿಲ್ಲಾಧ್ಯಕ್ಷನಾಗಿ ಉತ್ತಮವಾಗಿ ಸಂಘವನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರವಹಿಸಿ ನೌಕರರ ಹಿತವನ್ನು ಕಾಪಾಡುವಲ್ಲಿ ಸಫಲರಾಗಿರುವುದರಿಂದ ನಿಮ್ಮ ಉತ್ತಮ ಸೇವೆಯನ್ನು ಪರಿಗಣಿಸಿ ನಿಮ್ಮನ್ನು ಕೊಪ್ಪಳ ಜಿಲ್ಲಾಧ್ಯಕ್ಷನಾಗಿ ನೇಮಿಸಿ ಆದೇಶ ಮಾಡಲಾಗಿದೆ.
ಈ ಆದೇಶವು ಈ ಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶಿಸುತ್ತಾ ತಾವುಗಳು ಕೂಡಲೇ ಜಿಲ್ಲಾ ಸಂಘಟನೆಯ ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡು ಕೊಪ್ಪಳ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘವನ್ನು ಸ್ಥಾಪಿಸಿ ಸಂಘಟನೆಯನ್ನು ಬಲಪಡಿಸುತ್ತಾ ನೌಕರರ ಹಿತಕಾಯಲು ತಿಳಿಸಿದ್ದಾರೆ.
ಹರ್ಷ : ಕೊಪ್ಪಳ ಜಿಲ್ಲಾ ಪೌರ ನೌಕರರ ಸಂಘದ ಅಧ್ಯಕ್ಷರಾಗಿ ಶಿವಕುಮಾರ್ ಕಟ್ಟಿಮನಿ ಅವರನ್ನು ನೇಮಕಗೊಳಿಸಿದ್ದಕ್ಕೆ ಕೊಪ್ಪಳ ಜಿಲ್ಲಾ ಪೌರ ನೌಕರರು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.