ಜ. 25 ರಂದು ಗ್ರೂಪ್ ಬಿ ವೃಂದದ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ: ನಿಷೇದಾಜ್ಞೆ ಜಾರಿ

Get real time updates directly on you device, subscribe now.

 : ರಾಜ್ಯದ ವಿವಿಧ ಇಲಾಖೆಗಳಲ್ಲಿನ ಗ್ರೂಪ್ ಬಿ ವೃಂದದ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳು ಜನವರಿ 25 ರಂದು ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆಯವರೆಗೆ ಕೊಪ್ಪಳ ತಾಲ್ಲೂಕಿನ 9 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಸುತ್ತಲಿನ 200ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ವಿವರ: ಕೊಪ್ಪಳ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಬಾಲಕೀಯರ ಪದವಿ ಪೂರ್ವ ಕಾಲೇಜು, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲಾ ವಿಭಾಗ, ಸರ್ಕಾರಿ ಬಾಲಕೀಯರ ಜೂನಿಯರ್ ಕಾಲೇಜು (ಪ್ರೌಢಶಾಲಾ ವಿಭಾಗ), ಭಾಗ್ಯನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ), ಟಣಕನಕಲ್ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯ, ದದೇಗಲ್ ಗ್ರಾಮದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಈ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವಿವಿಧ ಇಲಾಖೆಗಳಲ್ಲಿನ ಗ್ರೂಪ್ ಬಿ ವೃಂದದ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳು ಜ. 25 ರಂದು ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿವೆ.
ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ತಡೆಗಟ್ಟಲು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ರ ಅನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ವಿವಿಧ ಷರತ್ತಿಗೆ ಒಳಪಟ್ಟು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷೆಯಲ್ಲಿ ಪ್ರವೇಶ ಪತ್ರ ಹೊಂದಿದ ಅಭ್ಯರ್ಥಿಗಳು ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನೂಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ. ನಕಲು ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ಕಾಪಿ ಬರೆದು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿರ್ಬಂಧಿಸಲಾಗಿದೆ. 200 ಮೀಟರ್ ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!