ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Get real time updates directly on you device, subscribe now.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2024-25ನೇ ಸಾಲಿನ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ವಿಸ್ತರಿಸಲಾಗಿದೆ.
 ಪ್ರಸಕ್ತ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್ ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನೀಡುವ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಫೆಬ್ರವರಿ 5ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗಾಗಿ ವೆಬ್‌ಸೈಟ್  https://bcwd.karnataka.gov.in/ ನೋಡಬಹುದು ಅಥವಾ ಸಹಾಯವಾಣಿ ಸಂಖ್ಯೆ: 8050770004 ಗೆ ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!