ಆಗಸ್ಟ್ 15ರಿಂದ ಸಸ್ಯಸಂತೆ, ತೋಟಗಾರಿಕೆ ಅಭಿಯಾನ: ಕೃಷ್ಣ ಉಕ್ಕುಂದ

Get real time updates directly on you device, subscribe now.

 : ತೋಟಗಾರಿಕೆ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ-2023ನ್ನು ಆಯೋಜಿಸಲಾಗುತ್ತಿದ್ದು, ಜಿಲ್ಲೆಯ ಸಮಸ್ತ ರೈತರು, ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ತೋಟಗಾರಿಕೆ ಉಪನಿರ್ದೇಶಕರಾದ ಕೃಷ್ಣ ಉಕ್ಕುಂದ ಅವರು ತಿಳಿಸಿದ್ದಾರೆ.
ತೋಟಗಾರಿಕೆ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಅನೇಕ ರೈತಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಅಲ್ಲದೇ ಸರ್ವತೋಮುಖ ಅಭಿವೃದ್ದಿಗಾಗಿ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ-2023 ಎನ್ನುವ ಕಾರ್ಯಕ್ರಮವನ್ನು ಆಗಸ್ಟ್ 15ರಿಂದ ಆಗಸ್ಟ್ 20ರ ವರೆಗೆ ಆರು ದಿನಗಳ ಕಾಲ ತೋಟಗಾರಿಕೆ ಇಲಾಖೆ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ಈ ಅಭಿಯಾನದಲ್ಲಿ ಜಿಲ್ಲೆಯ ರೈತರಿಗೆ ಹಾಗೂ ತೋಟಗಾರಿಕೆ ಬೆಳೆಗಳಲ್ಲಿ ಆಸಕ್ತಿ ಇರುವ ಸಾರ್ವಜನಿಕರಿಗೆ ಒಂದೇ ಸೂರಿನಡಿ ತೋಟಗಾರಿಕೆ ಕ್ಷೇತ್ರಗಳಲ್ಲಿ ಉತ್ಪಾದಿಸಿದ ಮಾವು, ತೆಂಗು, ಪೇರಲ, ಚಿಕ್ಕು, ಅಂಜೂರ, ಕರಿಬೇವು, ನುಗ್ಗೆ, ದ್ರಾಕ್ಷಿ ತಳಿಗಳಲ್ಲದೇ ಅನೇಕ ವಿಧದ ಕಸಿ-ಸಸಿಗಳು, ಅಲಂಕಾರಿಕ ಸಸ್ಯಗಳು, ಹೂವಿನ, ತರಕಾರಿ, ಔಷಧೀಯ, ಸಾಂಬಾರು ಸಸ್ಯಗಳು ಇದಲ್ಲದೇ ಅಪ್ರಧಾನ ಹಣ್ಣಗಳಾದ ನೇರಳೆ, ಸೀತಾಫಲ, ಬೀಜ ರಹಿತ ಸೀಬೆ, ಡ್ರ್ಯಾಗನ್ ಹಣ್ಣು, ಮೆಕಡೋನಿಯಾ, ಮಿಯಾ ಜಾಕಿ ಮಾವು, ಮುಂತಾದ ಸಸ್ಯಗಳನ್ನು ಇಲಾಖೆಯ ಯೋಗ್ಯ ದರದಲ್ಲಿ ಪೂರೈಸುವುದು ಹಾಗೂ ಪ್ರಮುಖ ಉದ್ದೇಶಗಳನ್ನು ಈ ಕಾರ್ಯಕ್ರಮದಲ್ಲಿ ಹಮ್ಮಿಕೊಳ್ಳಲಾಗಿದೆ.
*ಸಸ್ಯಸಂತೆ, ತೋಟಗಾರಿಕೆ ಅಭಿಯಾನದ ಉದ್ದೇಶ:* ಇಲಾಖೆ ಯೋಜನೆಗಳ ಬಗ್ಗೆ ರೈತರಿಗೆ ಮಾಹಿತಿ. ಇಲಾಖೆಯ ತೋಟಗಾರಿಕೆ ಕ್ಷೇತ್ರಗಳಲ್ಲಿ ಉತ್ಪಾದಿಸಿದ ಗುಣ ಮಟ್ಟದ ಸಸಿಗಳು, ಎರೆಹುಳು ಗೊಬ್ಬರ, ಎರೆಜಲ ಹಾಗೂ ಜೈವಿಕ ಗೊಬ್ಬರ, ನೀಮಾಸ್ತ್ರ, ಜೀವಾಮೃತ, ಗೋಕೃಪಾಮೃತ ಮಾರಾಟ. ವಿವಿಧ ಬ್ಯಾಂಕುಗಳಿಂದ ರೈತರಿಗೆ ದೊರೆಯುವ ಸಾಲ ಸೌಲಭ್ಯಗಳ ಮಾಹಿತಿ. ಸಮಗ್ರ ಖುಷ್ಕಿ ಒಣ ಬೇಸಾಯ, ಅಪ್ರಧಾನ ಹಣ್ಣುಗಳು, ವಿದೇಶಿ ಹಣ್ಣುಗಳು, ಅಲ್ಪಾವಧಿ, ಮಧ್ಯಾಮವಧಿ ಮತ್ತು ದೀರ್ಘಾವಧಿ ತೋಟಗಾರಿಕೆ ಬೆಳೆಗಳು ಹಾಗೂ ಸಮುದಾಯ ತೋಟಗಾರಿಕೆಯಿಂದ ಆಗುವ ಲಾಭಗಳ ಮಾಹಿತಿ. ನೀರಿನ ಮಿತವಾದ ಬಳಕೆಗೆ ಹನಿ ನೀರಾವರಿ ಮತ್ತು ರಸಾವರಿ ತಾಂತ್ರಿಕತೆ, ಇಸ್ರೇಲ್ ಮಾದರಿ ತಾಂತ್ರಿಕತೆ ಹಾಗೂ ತೋಟಗಾರಿಕೆಯಲ್ಲಿ ನವೀನ ತಾಂತ್ರಿಕತೆಗಳ ಬಗ್ಗೆ ಮಾಹಿತಿ. ತೋಟಗಾರಿಕೆ ಆಧಾರಿತ ಉಪಕಸುಬುಗಳಾದ ಜೇನು ಸಾಕಾಣಿಕೆ, ಅಣಬೆ ಬೇಸಾಯ, ಮೌಲ್ಯವರ್ಧನೆ ಬಗ್ಗೆ ಮಾಹಿತಿ. ತೋಟಗಾರಿಕೆ ಬೆಳೆ ವಿಮಾ ಬಗ್ಗೆ ಜಾಗೃತಿ, ಕೈ ತೋಟ, ತಾರಸಿ ತೋಟ, ವರ್ಟಿಕಲ್ ತೋಟ ಬಹುಮಹಡಿ ಪದ್ಧತಿಯಲ್ಲಿ ತೋಟಗಾರಿಕೆ ಬೆಳೆಗಳ ಪ್ರಾತ್ಯಕ್ಷತೆ. ತೋಟಗಾರಿಕೆ ಬೆಳೆಗಳ ಸಂಸ್ಕರಣೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಮಾಹಿತಿಯನ್ನು ರೈತರಿಗೆ ನೀಡುವ ಉದ್ದೇಶ ಹೊಂದಲಾಗಿದೆ.
ಹೆಚ್ಚಿನ ಮಾಹಿತಿಗಾಗಿ, ಜಿಲ್ಲಾ ತೋಟಗಾರಿಕೆ ಇಲಾಖೆ, ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾ.ವ.) ಕೊಪ್ಪಳ ಮೊ.ಸಂ: 7406504120 ಅಲ್ಲದೇ ಆಯಾ ತಾಲೂಕು ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ತೋಟಗಾರಿಕೆ ಉಪನಿರ್ದೇಶಕರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!
%d bloggers like this: