ಮಹಿಳೆಯರಿಗೆ ಬಹಳಷ್ಟು ಸೌಲಭ್ಯಗಳನ್ನು ನೀಡಲಾಗಿದೆ- ಜಿಲ್ಲಾಧಿಕಾರಿ ನಲಿಲ್ ಅತುಲ್
: ಮಹಿಳೆಯರಿಗೆ ಬಹಳಷ್ಟು ಸೌಲಭ್ಯಗಳನ್ನು ನೀಡಲಾಗಿದ್ದು ಅವುಗಳ ಸದುಪಯೋಗ ಪಡೆದುಕೊಂಡು ತಾವೆಲ್ಲರೂ ಮುಂದೆ ಬರಬೇಕು. ಇಂದಿನ ಯುವ ಮಹಿಳಾ ಯುಗವಾಗಿದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.ಮಹಿಳೆಯರ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಗೃಹ ಲಕ್ಷ್ಮೀ. ಶಕ್ತಿ ಯೋಜನೆಯಂತಹ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಇದರಿಂದ ತಮಗೆ ಬಹಳಷ್ಟು ಅನುಕೂಲವಾಗಿದೆ. ತಾವು ಬಸ್ಸಿನಲ್ಲಿ ಸ್ವತಂತ್ರವಾಗಿ ಎಲ್ಲಾ ಕಡೆ ಪ್ರಯಾಣ ಮಾಡುತ್ತಿದ್ದಿರಾ. ಮಹಿಳೆಯರು ಸ್ವತಂತ್ರವಾಗಿ ಜೀವನ ನಡೆಸಿದಾಗ ಅವರಿಗೆ ನಿಜವಾದ ಸ್ವಾತಂತ್ರ‍್ಯ ಸಿಗುತ್ತದೆ. ತಮಗೆಲ್ಲರಿಗೂ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಶುಭಾಶಯಗಳು ಎಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ್ ಎಸ್. ದರಗದ ಅವರು ಮುಖ್ಯ ಅಥಿತಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಭೇಟಿ ಬಚಾವೋ. ಬೇಟಿ ಪಡಾವೋ ಕಾರ್ಯಕ್ರಮ ಕಳೆದ 10 ವರ್ಷಗಳಿಂದ ಆಚರಣೆ ಮಾಡುತ್ತಾ ಬರುತ್ತಿದ್ದಾರೆ. ಇದರಿಂದ ಮಹಿಳೆಯರಿಗೆ ಅನುಕೂಲವಾಗಿದೆ. ನಮ್ಮ ಸಮಾಜದಲ್ಲಿ ಹೆಣ್ಣು ಮಗು ಬೇಡ ಗಂಡು ಮಗು ಬೇಕು ಎಂಬ ಅಭಿಪ್ರಾಯ ಇದೆ. ಇಲ್ಲಿ ಇಬ್ಬರ ಪಾತ್ರವು ಬಹಳ ಮುಖ್ಯ. ಮಕ್ಕಳಿಗೆ ಶಿಕ್ಷಣದ ಜೊತೆಗೆ ನೈತಿಕ ಶಿಕ್ಷಣ ಕೊಡಬೇಕು ಎಂದು ಹೇಳಿದರು.
ಮಹಿಳೆಯರು ಆರ್ಥಿಕವಾಗಿ ಸಮಾಜದಲ್ಲಿ ಸಬಲರಾಗಬೇಕು. ಶೈಕ್ಷಣಿಕವಾಗಿ. ರಾಜಕೀಯವಾಗಿ ಮುಂದೆ ಬರಬೇಕು. ಬಾಲ್ಯ ವಿವಾಹಗಳನ್ನು ಎಲ್ಲರೂ ತಡೆಯಬೇಕು. ಅಕ್ಕ ಮಾಹಾದೇವಿ ಹೇಳಿದಂತೆ ನಮ್ಮೊಳಗೆ ಸುಳಿವ ಆತ್ಮ ಗಂಡು ಅಲ್ಲ ಹೆಣ್ಣು ಅಲ್ಲ, ಪುರುಷ ಹಾಗೂ ಮಹಿಳೆಯರು ಸರಿ ಸಮಾನರಾಗಿದ್ದಾರೆ. ತಾವು ಉನ್ನತ ಹುದ್ದೆಗಳಿಗೆ ಹೋಗಬೇಕು. ಅಂದಾಗ ಕಾಯ್ದೆ ಕಾನೂನುಗಳನ್ನು ತಾವೇ ರೂಪಿಸುತ್ತಿರಾ ಎಂದು ಹೇಳಿದರು.
ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ, ನಮ್ಮ ದೇಶ ಉಜ್ಚಲವಾಗಿ ಬೆಳೆಯಬೇಕಾದರೆ ಮಹಿಳೆ ಅಥವಾ ತಾಯಿಯ ಪಾತ್ರ ಬಹಳ ಮುಖ್ಯ ಇದೆ. ಅನೇಕ ಮಹಿಳೆಯರು ದೇಶಕ್ಕಾಗಿ ತ್ಯಾಗ ಬಲಿದಾನಗಳನ್ನು ಮಾಡಿದ್ದಾರೆ. ವೀರರಾಣಿ ಕಿತ್ತೂರು ಚೆನ್ನಮ್ಮ. ಓನಕೆ ಓಬವ್ವ ಸೇರಿದಂತೆ ಹಲವಾರು ಮಹಿಳಾ ಹೋರಾಟಗಾರರನ್ನು ನಾವು ಕಾಣುತ್ತೇವೆ. ತಾಯಿ ಕಲಿತರೆ ಇಡೀ ಕುಟುಂಬ ಕಲಿಯುತ್ತದೆ ಹಾಗಾಗಿ ಮಹಿಳೆಯರು ಶಿಕ್ಷಣ ಪಡೆಯುವುದು ಅತ್ಯವಶ್ಯಕವಾಗಿದೆ. ಯಾವ ದೇಶದಲ್ಲಿ ಮಹಿಳೆಯರಿಗೆ ಪ್ರೋತ್ಸಾಹ ನೀಡುವುದಿಲ್ಲವೋ ಆ ದೇಶ ಮುಂದೆ ಬರಲು ಸಾಧ್ಯವಿಲ್ಲ ಎಂದು ಹೇಳಿದರು.
ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರವೀಂದ್ರನಾಥ ಅವರು, ಹೆಣ್ಣು ಭ್ರೂಣಲಿಂಗ ಹತ್ಯೆಯಿಂದಾಗುವ ದುಷ್ಪರಿಣಾಮ ಕುರಿತು ವಿಶೇಷ ಉಪನ್ಯಾಸ ನೀಡಿದರು. ಯುನಿಸೇಫ್ ಸಂಯೋಜಕರಾದ ಹರೀಶ್ ಜೋಗಿ ಬಾಲ್ಯವಿವಾಹ ತಡೆಗಟ್ಟುವ ಕುರಿತು ಮಾತನಾಡಿದರು.
ಬೇಟಿ ಬಚಾವೋ ಬೇಟಿ ಪಡಾವೋ ಅಭಿಯಾನದ ಸಹಿ ಸಂಗ್ರಹಣೆಗೆ ಜಿಲ್ಲಾಧಿಕಾರಿಗಳು ಚಾಲನೆ ನೀಡಿದರು. ಅಂಗನವಾಡಿ ಚಿಣ್ಣರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಹಲಗೇರಿ 3ನೇ ಅಂಗನವಾಡಿ ಕೇಂದ್ರದ ಮಗು ಪ್ರತಿಕ್ಷ್ಯಾ ಸಂವಿಧಾನ ಪೀಠಿಕೆಯ ಓದುವ ಮೂಲಕ ಎಲ್ಲರ ಗಮನ ಸೆಳೆಯಿತು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪರಶುರಾಮ ವಾಯ್ ಶೆಟ್ಟೆಪ್ಪನವರ, ಜಿಲ್ಲಾ ನಿರೂಪಣಾಧಿಕಾರಿ ಗಂಗಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಅನ್ನಪೂರ್ಣಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತ ಪೂಜಾರ, ಜಿಲ್ಲಾ ಅಕ್ಷರ ದಾಸೋಹ ಅಧಿಕಾರಿ ಅನಿತಾ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿ ಹಾಗೂ ಸಿಬ್ಬಂದಿಗಳು. ಅಂಗನವಾಡಿ ಕಾರ್ಯಕರ್ತರು. ಅಂಗನವಾಡಿ ಕೇಂದ್ರಗಳ ಮಕ್ಕಳು. ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿನಿಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಅವರು ಜಿಲ್ಲಾಡಳಿತ ಭವನದ ಆವರಣದಿಂದ ಚಾಲನೆ ನೀಡಿದರು. ಈ ಜಾಥಾ ಕಾರ್ಯಕ್ರಮ ಜಿಲ್ಲಾಡಳಿತ ಭವನದ ಆವರಣದಿಂದ ಜಿಲ್ಲಾ ಆಸ್ಪತ್ರೆಯವರೆಗೆ ನಡೆಯಿತು. ಇದರಲ್ಲಿ ವಿವಿಧ ಶಾಲಾ-ಕಾಲೇಜುಗಳ ವಿಧ್ಯಾರ್ಥಿನಿಯರು ಭಾಗವಹಿಸಿದ್ಧರು. ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.
Comments are closed.