ವಕೀಲರ ರಕ್ಷಣಾ ಕಾಯ್ದೆ ಜಾರಿ: ರಾಜಸ್ಥಾನದ ಕಾಯ್ದೆ ಅಧ್ಯಯನ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಜೂನ್ 03: ಕರ್ನಾಟಕ ವಕೀಲರ ಮಂಡಳಿ ಅಧ್ಯಕ್ಷ ಎಚ್.ಎಲ್.ವಿಶಾಲ ರಘು ಹಾಗೂ ಸದಸ್ಯರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.
ರಾಜಸ್ಥಾನದಲ್ಲಿ ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೆ ತಂದಿದ್ದು, ರಾಜ್ಯದಲ್ಲಿ ಈ ಕಾಯ್ದೆಯನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಕಾಯ್ದೆಯ ಪ್ರತಿಯನ್ನು ತರಿಸಿಕೊಂಡು ಅಧ್ಯಯನ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ವಕೀಲರ ಸಂಘಕ್ಕೆ ಶಾಶ್ವತವಾದ ಸ್ಥಳವಿಲ್ಲವಾಗಿದ್ದು, ಪ್ರಸ್ತುತ ಪ್ರೆಸ್ ಕ್ಲಬ್ ಬಳಿ ಇರುವ ಸ್ಥಳದಲ್ಲಿಯೇ ಶಾಶ್ವತವಾಗಿ ಸ್ಥಳಾವಕಾಶ ಮಾಡಿಕೊಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
Implementation of Advocate Protection Act : Rajasthan’s Act to be studied: Chief Minister Siddaramaiah
Bengaluru, June 03 : Chief Minister Siddaramaiah held a meeting with a delegation led by H.L.Vishal Raghu, Chairman, Karnataka State Bar Council and Members at home office Krishna, here today.
The Chief Minister said that Lawyers Protection Act has already been implemented in Rajasthan and the same would be studied in detail before implementing the Act here in Karnataka.
The delegation of the Advocates Association appealed to the Chief Minister to provide a permanent office space for the Association for its functioning.
Comments are closed.