ಸಂಭವನೀಯ ಅತಿವೃಷ್ಟಿ, ಅನಾವೃಷ್ಟಿಗೆ ಮುಂಜಾಗ್ರತಾ ಕ್ರಮ ಅನುಸರಿಸಿ: ಅಜಯ ಕುಮಾರ್

Get real time updates directly on you device, subscribe now.

ಆನೆಗೊಂದಿ ಪ್ರೌಢಶಾಲೆಯಲ್ಲಿ ಎನ್.ಡಿ.ಆರ್.ಎಫ್ ತಂಡದಿಂದ ವಿಪತ್ತು ನಿರ್ವಹಣೆಯ ಅಣುಕು ಪ್ರದರ್ಶನ

  ಸಂಭವನೀಯ ಅತಿವೃಷ್ಟಿ, ಅನಾವೃಷ್ಟಿಗೆ ಮುಂಜಾಗ್ರತಾ ಕ್ರಮ ಅನುಸರಿಸಬೇಕು ಎಂದು ಎನ್.ಡಿ.ಆರ್.ಎಫ್ ಇನ್ಸಿಫೆಕ್ಟರ್ ಅಜಯ ಕುಮಾರ್ ಹೇಳಿದರು.
 ಅವರು ಶುಕ್ರವಾರ ಗಂಗಾವತಿ ತಾಲೂಕಿನ ಆನೆಗೊಂದಿ ಗ್ರಾಮದ ಸರಕಾರಿ ಪ್ರೌಢಶಾಲೆ ಆವರಣದಲ್ಲಿ ನಡೆದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಬೆಟಾಲಿಯನ್ 10ನೇ ತಂಡದಿಂದ ವಿಪತ್ತು ನಿರ್ವಹಣೆಯ ಅಣುಕು ಪ್ರದರ್ಶನ ಹಾಗೂ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಬೆಟಾಲಿಯನ್ 10ನೇ ತಂಡದಿಂದ ಸಂಭವನೀಯ ವಿಪತ್ತು, ಪ್ರವಾಹ ಸ್ಥಳಗಳಿಗೆ ಆಗಮಿಸಿ ಸಮುದಾಯ ಜಾಗೃತಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಕೊಪ್ಪಳ ಜಿಲ್ಲೆಯ ನದಿ ಪಾತ್ರದ ಗ್ರಾಮಗಳಲ್ಲಿ ಹಾಗೂ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಗುತ್ತಿದೆ. ಸಂಭವನೀಯ ಅತಿವೃಷ್ಟಿ ಹಾಗೂ ಅನಾವೃಷ್ಟಿ ಗ್ರಾಮಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ತಿಳಿದುಕೊಳ್ಳುವುದು ಅತ್ಯವಶ್ಯಕವಾಗಿದೆ ಎಂದರು.
ಪ್ರಕೃತಿ ವಿಕೋಪ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಪ್ರಥಮ ಚಿಕಿತ್ಸೆ, ಪ್ರವಾಹ ರಕ್ಷಣೆ, ಪ್ರಕೃತಿ ವಿಕೋಪದಿಂದ ಆಗುವ ಅನಾಹುತ, ಅನಿಲ ಸೋರಿಕೆ ತಡೆಗಟ್ಟುವಿಕೆ, ಸುನಾಮಿ, ಭೂಕಂಪ, ಅಗ್ನಿ ಅವಘಡ ಹಾಗೂ ಸಿಡಿಲು ಬಡಿತದಿಂದ ರಕ್ಷಣೆ ಸೇರಿದಂತೆ ಕಟ್ಟಡ ಕುಸಿತ, ರಾಸಾಯನಿಕ ಪದಾರ್ಥಗಳಿಂದ ಆಗುವ ಅನಾಹುತಗಳು ಮತ್ತು ಇನ್ನಿತರ ಅನಾಹುತಗಳಿಂದ ಸಾರ್ವಜನಿಕರು ಯಾವ ರೀತಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ಎನ್‌ಡಿಆರ್‌ಎಫ್ ತಂಡದ ಸದಸ್ಯರಾದ ವಜ್ರಚೇತನ ಅವರು ಮಾಹಿತಿ ನೀಡಿದರು. ಎನ್‌ಡಿಆರ್‌ಎಫ್ ತಂಡದ ಸದಸ್ಯರು ಹಾಗೂ ವಿದ್ಯಾರ್ಥಿಗಳಿಂದ ಅಣಕು ಪ್ರದರ್ಶನ ನೀಡಿ ಅರಿವು ಮೂಡಿಸಿದರು.
ಆನೆಗೊಂದಿ ಗ್ರಾಪಂ ಅಧ್ಯಕರಾದ ಹುಲಿಗೆಮ್ಮ ಹೊನ್ನಪ್ಪ ನಾಯಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗಾವತಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ, ಎನ್.ಡಿ.ಆರ್.ಎಫ್ ತಂಡದ ಎ.ಎಸ್.ಐ ಸೋಮ್ ಬಿರ್ ಕುಮಾರ್, ಗ್ರೇಡ್ 2 ತಹಸೀಲ್ದಾರ ಮಹಾಂತಗೌಡ್ರು, ಶಿರಸ್ತೆದಾರ ರವಿಕುಮಾರ ನಾಯಕವಾಡಿ, ಶಿಕ್ಷಣ ಇಲಾಖೆಯ ಟಿಪಿಓ (ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು) ಉಮಾದೇವಿ ಪಾಟೀಲ್, ಆನೆಗೊಂದಿ ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿ ಬಸವರಾಜ ಗೌಡ್ರ, ಗ್ರಾಪಂ ಸದಸ್ಯರಾದ ಎಚ್.ಎಂ ಮಲ್ಲಿಕಾರ್ಜುನಸ್ವಾಮಿ ಹಾಗೂ ಸುಶೀಲಾಬಾಯಿ, ಕಂದಾಯ ನಿರೀಕ್ಷಕ ಬಸೀರುದ್ದಿನ್, ಶಾಲಾ ಮುಖ್ಯಶಿಕ್ಷಕರಾದ ವಿಜಯಕುಮಾರ್, ಎನ್.ಡಿ.ಆರ್.ಎಫ್ ತಂಡದ ಸದಸ್ಯರಾದ ವಜ್ರಚೇತನ, ಗಂಗಾಧರ ಚಿಕ್ಕೊಡಿ, ಕರುಣಾಮೂರ್ತಿ, ಶಶಿಕಾಂತ, ಗಂಗಾಧರ ಶಂಕರಪ್ಪ, ಗ್ರಾಪಂ ಕಾರ್ಯದರ್ಶಿ ಮನೋರಮ, ತಾಲೂಕ ಐಇಸಿ ಸಂಯೋಜಕ ಬಾಳಪ್ಪ ತಾಳಕೇರಿ, ಗ್ರಾಮ ಆಡಳಿತಾಧಿಕಾರಿ ಮಹಾಲಕ್ಷ್ಮಿ, ಕಂದಾಯ ಇಲಾಖೆ ಸಿಬ್ಬಂದಿಗಳು, ಗ್ರಾಪಂ ಸಿಬ್ಬಂದಿಗಳು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!