ಜ. 26 ರಂದು ಕೊಪ್ಪಳದಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ

Get real time updates directly on you device, subscribe now.

ಕೊಪ್ಪಳ ಜಿಲ್ಲಾಡಳಿತದ ವತಿಯಿಂದ 76ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯವನ್ನು ಜನವರಿ 26 ರಂದು ಬೆಳಿಗ್ಗೆ 9 ಗಂಟೆಗೆ ಕೊಪ್ಪಳ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
 ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸುವರು. ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಮತ್ತು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ ನಭಿಸಾಬ ದೋಟಿಹಾಳ ಹಾಗೂ ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಶ್ರೀನಿವಾಸ್ ಗುಪ್ತಾ ಅವರು ಭಾಗವಹಿಸುವರು.
76ನೇ ಗಣರಾಜ್ಯೋತ್ಸವ ದಿನಾಚರಣೆ ನಿಮಿತ್ತ ಪಥಸಂಚಲನ, ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್ ಅರಸಿದ್ದಿ ಅವರು ಉಪಸ್ಥಿತರಿರುವರುಎಂದು ಕೊಪ್ಪಳ ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!