ಸಂವಿಧಾನದ ಆಶಯಗಳನ್ನು ಈಡೇರಿಸುವಲ್ಲಿ ಎಲ್ಲರೂ ಶ್ರಮಿಸೋಣ: ಪ್ರಕಾಶ ವಿ
ಭಾರತ ಸಂವಿಧಾನದಲ್ಲಿರುವ ಆಶಯಗಳನ್ನು ಈಡೇರಿಸುವಲ್ಲಿ ಪ್ರತಿಯೊಬ್ಬ ಭಾರತೀಯ ಶ್ರಮಿಸುವಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ತಾಲೂಕ ಪಂಚಾಯತ ಆಡಳಿತಾಧಿಕಾರಿ ಹಾಗು ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರಾದ ಪ್ರಕಾಶ ವಿ ಕರೆ ನೀಡಿದರು.
76ನೇ ಗಣರಾಜ್ಯೋತ್ಸವ ನಿಮಿತ್ಯ ಕೊಪ್ಪಳ ತಾಲೂಕ ಪಂಚಾಯತ ಆವರಣದಲ್ಲಿ ಭಾನುವಾರ ಧ್ವಜಾರೋಹಣ ನೇರವೇರಿಸಿ ಅವರು ಮಾತನಾಡಿದರು.
ಡಾ. ಬಿ.ಆರ್ ಅಂಬೇಡ್ಕರ್ ರವರು ಬರೆದ ಭಾರತ ಸಂವಿಧಾನವು ಇಡಿ ವಿಶ್ವಕ್ಕೆ ಮಾದರಿಯಾಗಿದೆ. ಎಲ್ಲರಿಗೂ ರಾಜಕೀಯ, ಆರ್ಥಿಕ, ಸಾಮಾಜಿಕ ನ್ಯಾಯ ದೊರಕಿಸುವಲ್ಲಿ ಅವಿರತವಾಗಿ ಶ್ರಮಿಸಿದ್ದಾರೆ ಎಂದರು.
ಈ ಕಾರ್ಯಕ್ರಮದಲ್ಲಿ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ದೇವರಾಜ, ಸಹಾಯಕ ಲೆಕ್ಕಾಧಿಕಾರಿ ರವಿಕುಮಾರ, ಸಹಾಯಕ ನಿರ್ದೇಶಕ(ಪಂ.ರಾಜ್) ಮಹೇಶ್, ತಾಲೂಕ ಯೋಜನಾಧಿಕಾರಿ ರಾಜೇಸಾಬ ನದಾಫ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ, ವ್ಯವಸ್ಥಾಪಕ ಬಸವರಾಜ ಪಾಟೀಲ್, ತಾಲೂಕ ಪಂಚಾಯತಿಯ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Comments are closed.