76 ನೇ ಗಣರಾಜ್ಯೋತ್ಸವ ಆಚರಣೆ

ಕೊಪ್ಪಳ : ನಗರದ ಶ್ರೀ ಗವಿಸಿದ್ದೇಶ್ವರ ಸಂಯುಕ್ತ ಪ್ರೌಢಶಾಲೆಯಲ್ಲಿ 76 ನೇ ಗಣರಾಜ್ಯೋತ್ಸವ ಆಚರಿಸಲಾಯಿತು.
ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಅಮರೇಶ್ ಕರಡಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಸಂವಿಧಾನ ಕರಡು ರಚನಾ ಸಮಿತಿ ಅಧ್ಯಕ್ಷರಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ ಅವಿರತ ಪರಿಶ್ರಮದ ಫಲವಾಗಿ ಜನವರಿ 26 1950 ರಂದು ಭಾರತದ ಸಂವಿಧಾನವನ್ನು ಅಂಗೀಕರಿಸಲಾಯಿತು, ಈ ದಿನವನ್ನು ನಾವು ಗಣರಾಜ್ಯ ದಿನವನ್ನಾಗಿ ಆಚರಿಸುತ್ತಾ ಬಂದಿದ್ದೇವೆ, ಭಾರತ ದೇಶದ ಸಂವಿಧಾನ ಇಡೀ ವಿಶ್ವಕ್ಕೆ ಮಾದರಿಯದ ಸಂವಿಧಾನ ಎಂದರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
Comments are closed.