ಭಾರತ ದೇಶಕ್ಕೆ ಅಂಬೇಡ್ಕರ್ ಕೊಡುಗೆ ಅಪಾರ: ಮಾರುತಿ ಮ್ಯಾಗಳಮನಿ 

Get real time updates directly on you device, subscribe now.

ಕೊಪ್ಪಳ:-
ಸರದಾರಗಲ್ಲಿ ಶಾಲೆಯಲ್ಲಿ 76ನೇ ಗಣರಾಜ್ಯೋತ್ಸವ ಧ್ವಜರೋಹಣ ಕಾರ್ಯಕ್ರಮವನ್ನು ಮುಖ್ಯೋಪಾಧ್ಯಾಯರು ಹಾಗೂ ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಬಿ ರವರು ನೆರವೇರಿಸುವುದರ ಜೊತೆಗೆ ಸಸಿಗೆ ನೀರು ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಭಾರತ ದೇಶದ ಕಾನೂನುಗಳನ್ನು, ಸಂವಿಧಾನವನ್ನು ತಿಳಿದುಕೊಳ್ಳುವುದು ಪ್ರತಿಯೊಬ್ಬ ವ್ಯಕ್ತಿಯ ಕರ್ತವ್ಯ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಪದವೀಧರ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಮಾರುತಿ ಮ್ಯಾಗಳ ಮನಿ ಭಾರತ ದೇಶಕ್ಕೆ ಡಾ// ಬಿ.ಆರ್ ಅಂಬೇಡ್ಕರ್ ಅವರ ಕೊಡುಗೆ ಅಪಾರ ಮತ್ತು ಸಂವಿಧಾನದ ಮೂಲಭೂತ ಹಕ್ಕುಗಳು, ಕರ್ತವಗಳ ಕುರಿದು ತಿಳಿದುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಹಾಗೂ ಈ ದಿನ ಶಾಲಾ ಕಾಲೇಜುಗಳಲ್ಲಿ ಸರಕಾರಿ ಕಚೇರಿಗಳಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತದೆ ಎಂದರು.
ಜೊತೆಗೆ ಶಿಕ್ಷಕೀಯರಾದ ಅಶ್ವಿನಿ ಎಮ್ಮಿ, ವಿಜಯಲಕ್ಷ್ಮಿ ಮಾತನಾಡಿದರು ಹಾಗೂ ವಿವಿಧ ಸ್ಪರ್ಧೆಯಲ್ಲಿ ಜಯಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶಿಕ್ಷಕರಾದ ಬಸವರಾಜ ಹೊಸಮನಿ, ನರಸಿಂಗರಾವ್, ಟಾಟಾ ಟ್ರಸ್ಟ್ ಶಿಕ್ಷಕಿ ಶಕ್ತಿ ಮೇಡಂ ಉಪಸ್ಥಿತರಿದ್ದರು. ಪ್ರಾರ್ಥನಾ ಗೀತೆಯನ್ನು ವಿದ್ಯಾರ್ಥಿನಿ ಹುಲಿಗೆಮ್ಮ ಸಂಗಡಿಗರು ಹಾಡಿದರು, ಶಿಕ್ಷಕಿಯರಾದ ಅಶ್ವಿನಿ ಸ್ವಾಗತಿಸಿದರು, ರತ್ನಮ್ಮ ವಂದಿಸಿದರು, ಪಲ್ಲವಿ ನಿರೂಪಿಸಿದರು.

Get real time updates directly on you device, subscribe now.

Comments are closed.

error: Content is protected !!