ದೇಶಕ್ಕಾಗಿ ನಾವು ಏನಾದರು ಕೊಡುಗೆ ನೀಡಬೇಕಿದೆ- ಜಿಲ್ಲಾಧಿಕಾರಿ ನಲಿನ್ ಅತುಲ್

Get real time updates directly on you device, subscribe now.

ದೇಶ ನಮಗೆ ಏನು ಕೊಟ್ಟಿದೆ ಎನ್ನುವುದಕ್ಕಿಂತ ದೇಶಕ್ಕಾಗಿ ನಾವು ಏನು ಮಾಡಿದ್ದಿವಿ ಎಂದು ಗಣರಾಜೋತ್ಸವ ದಿನಾಚರಣೆ ಈ ಸಂದರ್ಭದಲ್ಲಿ ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
 ಅವರು ಭಾನುವಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ 76ನೇ ಗಣರಾಜೋತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ನಾವು ಮಾಡುವ ಕೆಲಸ ನಮ್ಮ ಜನರಿಗೆ ಉಪಯೋಗವಾಗುವ ರೀತಿಯಲ್ಲಿ ಇರಬೇಕು ಮತ್ತು ಅಂತಹ ಯೋಜನೆ ರೂಪಿಸಬೇಕು. ಮುಂದಿನ 5 ವರ್ಷದ ಕೃಷಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಅಭಿವೃದ್ಧಿ ಯೋಜನೆ ಜಿಲ್ಲೆಯಲ್ಲಿ ಮಾಡಿದ್ದೆವೆ. ಪ್ರವಾಸೋದ್ಯಮ 5 ವರ್ಷದ ಬ್ರ್ಯಾಂಡ್ ಮಾಡಿ ನಮ್ಮ ಜಿಲ್ಲೆ ಅಂತರಾಷ್ಟ್ರೀಯ ಯ ಮಟ್ಟದಲ್ಲಿ ಗುರುತಿಸಬೇಕಿದೆ. ಇದಕ್ಕೆ ಅಧಿಕಾರಿಗಳು ಎಲ್ಲಾ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಜಾರಿಗೆ ತರುವ ಜವಾಬ್ದಾರಿ ತಮ್ಮ ಮೇಲಿದೆ ಎಂದು ಹೇಳಿದರು.
ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಯಿಂದ ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕೆಲಸ ಕಾರ್ಯಗಳು ನಡೆಯುತ್ತಿವೆ. ನಮ್ಮ ಜಿಲ್ಲೆಗೆ ಪದ್ಮಶ್ರೀ ಪ್ರಶಸ್ತಿ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ ತೊಗಲು ಗೊಂಬೆಯಾಟಕ್ಕೆ ಬಂದಿರುವುದು ಸಂತಸ ತಂದಿದೆ. ತಮಗೆಲ್ಲರಿಗೂ ಗಣರಾಜೋತ್ಸವ ದಿನಾಚರಣೆ ಶುಭಾಶಯಗಳು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿ.ಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರೇಷ್ಮಾ ಹಾನಗಲ್, ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ಅಮೀನ್ ಅತ್ತಾರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್., ಆಹಾರ ಇಲಾಖೆ ಉಪನಿರ್ದೇಶಕ ಸೋಮಶೇಖರ ಬಿರಾದರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಪುಷ್ಪನವನ ಸಲ್ಲಿಕೆ: ಧ್ವಜಾರೋಹಣ ಕಾರ್ಯಕ್ರಮದ ಬಳಿಕ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹುತಾತ್ಮ ದಿನದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಎಡಿಸಿ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದು, ಸಂಗೊಳ್ಳಿ ರಾಯಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

Get real time updates directly on you device, subscribe now.

Comments are closed.

error: Content is protected !!