ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ
ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ 19 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ನೇಮಕಾತಿ ಮಾಡುವ ಸಲುವಾಗಿ ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ 19 ಹುದ್ದೆಗಳಿಗೆ 1:1 ಅನುಪಾತದಲ್ಲಿ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ತಯಾರಿಸಿ ಕೊಪ್ಪಳ ಜಿಲ್ಲಾ ವೆಬ್‌ಸೈಟ್ koppal.nic.in ರಲ್ಲಿ ಪ್ರಕಟಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು ಎಂದು ಕೊಪ್ಪಳ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.